ಮಾನವಿ ತಾಪಂ 'ಕೈ'ಗೆ
ಕ.ಪ್ರ. ವಾರ್ತೆ ರಾಯಚೂರು ಜ.3
ಮಾನವಿ ತಾಲೂಕು ಪಂಚಾಯ್ತಿಯ ಎರಡನೇ ಅವಧಿಯ ಪೂರ್ಣ ಅವಧಿಗೆ ಶುಕ್ರವಾರ ಆಯ್ಕೆ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ಅಮರಮ್ಮ ಹಾಗೂ ಉಪಾಧ್ಯಕ್ಷೆಯಾಗಿ ನಾಗಮ್ಮ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಮಂಜುಶ್ರೀ ಈ ಇಬ್ಬರ ಆಯ್ಕೆಯನ್ನು ಪ್ರಕಟಿಸಿದರು.
ತಾಪಂನ ಒಟ್ಟು 29 ಸದಸ್ಯರಲ್ಲಿ 15 ಜನ ಬಿಜೆಪಿ, 13 ಕಾಂಗ್ರೆಸ್ ಮತ್ತು ಒಬ್ಬರು ಜೆಡಿಎಸ್ ಸದಸ್ಯರಿದ್ದಾರೆ. ನಿಗದಿತ ಸಮಯಕ್ಕೆ ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ, ಉಪಾಧ್ಯಕ್ಷೆ ಸ್ಥಾನಕ್ಕೆ ಈರಣ್ಣ ಎಂಬುವವರು ತಮ್ಮ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದಿಂದ ಅಮರಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ನಾಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಕೊನೆಗೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ನ ಅಮರಮ್ಮ ಹಾಗೂ ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿ ನಾಗಮ್ಮ ಅವರ ಪರ 21 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಅವರ ಪ್ರತಿಸ್ಪರ್ಧಿಗಳಾಗಿದ್ದ ನರಸಮ್ಮ ಮತ್ತು ಈರಣ್ಣ ಅವರ ಪರ 8 ಜನ ಸದಸ್ಯರು ಬೆಂಬಲ ವ್ಯಕ್ತಪಡಿಸುವ ಮೂಲಕ ಮಾನವಿ ತಾಪಂ ಕಾಂಗ್ರೆಸ್ ಪಾಲಾಯಿತು.
ದೂರಿಗೆ ನಿರ್ಧಾರ: ಮಾನವಿ ತಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ನ ಏಕೈಕ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಬಿಜೆಪಿಗೆ ಬಹುಮತವಿದ್ದರೂ 7 ಜನ ಸದಸ್ಯರು ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲಿಸಿರುವುದು ಬಹುತೇಕ ಖಚಿತವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾನವಿ ತಾಲೂಕು ಬಿಜೆಪಿ ಅಧ್ಯಕ್ಷ ತಿಮ್ಮಾರೆಡ್ಡಿ ಭೋಗಾವತಿ, ತಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ವೇಳೆ ಬಿಜೆಪಿ ಸದಸ್ಯರು ಯಾರನ್ನು ಬೆಂಬಲಿಸಿದ್ದಾರೆಂಬ ವಿಷಯಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದು ಚುನಾವಣೆ ಆಯೋಗಕ್ಕೆ ಅಂಥ ಸದಸ್ಯರ ವಿರುದ್ಧ ಅನರ್ಹತೆಗೆ ಕೋರಿ ದೂರು ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

