ಅಧಿಕಾರಿಗಳ ವಿರುದ್ಧ ದೂರು
ಲಿಂಗಸ್ಗೂರು: ತಾಲೂಕಿನ ಮುದಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ತಹಸೀಲ್ದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಸಲ್ಲಿಸಿದರು.
ಮುದಗಲ್ ಪಟ್ಟಣ ಪಂಚಾಯಿತಿ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಹಾಗೂ ತಹಸೀಲ್ದಾರ್ ಜಿ.ಎಸ್.ಮಹಾಜನ್ರ ಭಷ್ಟಾಚಾರದಿಂದ ಆದಾಯ ಕಡಿಮೆ ಮಾಡಿಕೊಂಡ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ದೂರು ಆಧರಿಸಿ ಸಹಾಯಕ ಆಯುಕ್ತ ಟಿ.ಯೋಗೇಶ್ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡಿದರೂ ಇದುವರೆಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದೆ ಭ್ರಷ್ಟ ಅಧಿಕಾರಿಗಳ ರಕ್ಷಣೆ ಮಾಡಿರುವುದು ಆಡಳಿತ ವೈಫಲ್ಯತೆ ಸಾಬೀತು ಪಡಿಸಿದೆ.
ಕೂಡಲೇ ಟೆಂಡರ್ ಪ್ರಕ್ರಿಯೆ ರದ್ದುಪಡಿಸಿ ಪುನಃ ಟೆಂಡರ್ ಕರೆಯಬೇಕು. ಸಮಿತಿ ಮಾಡಿದ ಆರೋಪ ಹಾಗೂ ಎಸಿ ಅವರು ಸಲ್ಲಿಸಿದ ವರದಿ ಆಧರಿಸಿ ತಹಸೀಲ್ದಾರ್ ಮತ್ತು ಮುಖ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ಮನವಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ, ಮುಖಂಡರಾದ ಮಾನಪ್ಪ ಪೂಜಾರಿ, ಯಂಕಪ್ಪ ಚಿತ್ತಾಪೂರ, ಕೆಂಚಪ್ಪ ಆನಾಹೊಸೂರು, ಚನ್ನಬಸವ ಕುಣೆಕೆಲ್ಲೂರ, ಸೋಮಣ್ಣ ಬಚ್ಯಾಳ, ನಾಗರಾಜ ಹಾಲಬಾವಿ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

