ರಾಯಚೂರು

ಕಾಂಗ್ರೆಸ್ ಸರ್ಕಾರದಿಂದ ರೈತರ ಹಿತ ಕಡೆಗಣನೆ; ಟೀಕೆ

Published On :

ರಾಯಚೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಕೃಷಿ ಉತ್ಪನ್ನಕ್ಕೆ ವೈಜ್ಞಾನಿಕ ಬೆಲೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಇಂಥ ಸರ್ಕಾರದಿಂದ ರೈತರ ಹಿತ ಕಾಯುವುದನ್ನು ನಿರೀಕ್ಷಿಸಲಾಗದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸನಗೌಡ ಬ್ಯಾಗವಾಟ್ ಟೀಕಿಸಿದರು.
ನಗರದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಬಿಜೆಪಿಯ ರೈತ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ರೈತರು ತಾವು ಬೆಳೆದ ವಿವಿಧ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆಗೆ ನಿರಂತರ ಹೋರಾಟ ನಡೆಸಿದ್ದಾರೆ. ಆದರೆ ಸರ್ಕಾರ ಮಾತ್ರ ಸೂಕ್ತ ರೀತಿಯಲ್ಲಿ ಸ್ಪಂದಿಸಿ ರೈತರ ಸಮಸ್ಯೆ ಪರಿಹರಿಸುವ ಕಾರ್ಯ ಮಾತ್ರ ಮಾಡುತ್ತಿಲ್ಲ ಎಂದು ದೂರಿದರು.
ಬೆಳಗಾವಿಯ ಸುವರ್ಣಸೌಧದ ಎದುರು ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಈ ಘಟನೆ ಸರ್ಕಾರದ ಬೇಜವಾಬ್ದಾರಿಯುತ ನದ ಸ್ಪಷ್ಟ ಸಂಕೇತವಾಗಿದೆ ಎಂದು ಟೀಕಿಸಿದರು.
ರೈತ ವಿರೋಧಿ ಸರ್ಕಾರದ ವಿರುದ್ಧ ರಾಜ್ಯದ ರೈತರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಪಾಠ ಕಲಿಸಬೇಕು ಎಂದ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಗೆಲುವಿಗೆ ಪಕ್ಷದ ಎಲ್ಲರೂ ಶ್ರಮಿಸಬೇಕೆಂದು ಮನವಿ ಮಾಡಿದರು.
ದೇಶದಲ್ಲಿ ಯುಪಿಎ ಸರ್ಕಾರದ ಆಡಳಿತ ಕೊನೆಗಾಣಿಸಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿ ಸೇರ್ಪಡೆಗೊಳ್ಳುತ್ತಿರುವುದು ಹೆಚ್ಚು ಬಲ ನೀಡಿದೆ ಎಂದು ಹೇಳಿದರು.
ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಮಾತನಾಡಿದರು.
ವೇದಿಕೆಯಲ್ಲಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಗಿರೇಗೌಡ, ಶರಣಗೌಡ, ಕುಮಾರಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಆರ್. ತಿಮ್ಮಯ್ಯ, ತ್ರಿವಿಕ್ರಮ್ ಜೋಷಿ, ಬಂಡೇಶ್ ವಲ್ಕಂದಿನ್ನಿ, ರಮಾನಂದ ಯಾದವ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.