ರಾಯಚೂರು

'ಬಿಎಸ್‌ವೈ ಆಗಮನ ಬಿಜೆಪಿಯಲ್ಲಿ ಹುರುಪು'

Published On :

ಸಿಂಧನೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಷರತ್ತುರಹಿತವಾಗಿ ಬಿಜೆಪಿಗೆ ಆಗಮಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹಾಗೂ ಮುಖಂಡರಲ್ಲಿ ಹೊಸ ಹುರುಪು ಮೂಡಿಸಿದೆ ಎಂದು ಕೊಪ್ಪಳ ಸಂಸದ ಶಿವರಾಮೇಗೌಡ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರು ಪಕ್ಷದಿಂದ ಹೊರಹೋದಾಗ ವಿಧಾನಸಭೆ ಚುನಾವಣೆಯಲ್ಲಿ ನಷ್ಟ ಅನುಭವಿಸಿತ್ತು. ಆದರೆ ಪುನಃ ಪಕ್ಷಕ್ಕೆ ಆಗಮಿಸಿರುವುದು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಖಚಿತ ಎಂದು ಭವಿಷ್ಯ ನುಡಿದರು. ತಾವು ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಕ್ಕಿ ಹಾಕಿಕೊಂಡಿಲ್ಲ. ತಾವೊಬ್ಬ ಶುಭ್ರ ರಾಜಕಾರಣಿ. ಅದಕ್ಕಾಗಿ ಪಕ್ಷದ ನೇತಾರರು ತಮಗೆ ಟಿಕೆಟ್ ನೀಡುವುದು ಖಚಿತ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ಮುಖಂಡರಾದ ಕರಡಿ ಸಂಗಣ್ಣ, ಹಾಲಪ್ಪ ಆಚಾರ್ ಅವರ ಹೆಸರು ಚುನಾವಣೆಗೆ ಚಾಲ್ತಿಯಲ್ಲಿವೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಪಕ್ಷ ಸೇರ್ಪಡೆ ಬಗ್ಗೆ ಗೊತ್ತಿಲ್ಲ. ಆದರೆ ಟಿಕೆಟ್ ಕೊಟ್ಟರೆ ಪಕ್ಷ ಸೇರುತ್ತೇವೆ ಎಂಬುದು ಸರಿಯಾದುದಲ್ಲ. ಮಾಜಿ ಸಿಎಂ ಯಡಿಯೂರಪ್ಪನವರೇ ಬೇಷರತ್ತಾಗಿ ಪಕ್ಷ ಸೇರಿದ್ದಾರೆ. ಅಂದ ಮೇಲೆ ಉಳಿದವರು ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕೆಂದು ಸೂಚ್ಯವಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.