ರಾಯಚೂರು

ಕ್ರೀಡಾಕೂಟದ ಯಶಸ್ಸಿಗೆ ಸೂಚನೆ

Published On :

ರಾಯಚೂರು: ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಅಚ್ಚುಕಟ್ಟಾಗಿ ನೆರವೇರಿಸಬೇಕು. ಯಾವುದೇ ಲೋಪದೋಷಗಳಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಸೂಚಿಸಿದರು.
ನಗರದಲ್ಲಿ ಸೋಮವಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜ.9 ಮತ್ತು 10 ರಂದು ಕ್ರೀಡಾಕೂಟ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂದರು. ಜಿಲ್ಲಾಡಳಿತ, ಜಿಪಂ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಗಳು ಕ್ರೀಡಾಕೂಟವನ್ನು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದು ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸುವಂತೆ ಸೂಚಿಸಿದರು. ಸಭೆಯಲ್ಲಿ ಎಸ್ಪಿ ಎಂ.ಎನ್. ನಾಗರಾಜ, ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ, ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿದ್ದಲಿಂಗಯ್ಯ, ಆರ್.ಎಸ್. ಕಣಬರಗಿ, ನೌಕರರ ಸಂಘದ ಅಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜ.9 ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.