22ಕ್ಕೆ ಕೃಷಿ ಮಾರಾಟ ಮಂಡಳಿಗೆ ಮುತ್ತಿಗೆ
ಕ.ಪ್ರ. ವಾರ್ತೆ ರಾಯಚೂರು ಜ.8
ಎಪಿಎಂಸಿಗಳಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಕನಿಷ್ಠ 10 ಸಾವಿರ ಕೂಲಿ ದರ ನಿಗದಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜ.22ರಂದು ಬೆಂಗಳೂರಿನ ಕೃಷಿ ಮಾರಾಟ ಮಂಡಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಕಾರ್ಮಿಕರ ಸಮಸ್ಯೆ ಗಳಿಗೆ ಪರಿಹಾರ ಹುಡುಕುವಂತೆ ಒತ್ತಾಯಿಸಿ ಸಂಘಟನೆಯಿಂದ ನಿರಂತರ ಹೋರಾಟ ಮಾಡಿದರೂ ಸಮಸ್ಯೆಗಳು ಪರಿಹಾರ ಕಂಡಿಲ್ಲ ಎಂದು ದೂರಿದರು.
ಹೋರಾಟಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಹಮಾಲಿ ಕಾರ್ಮಿಕರು, ಬಿಸಿಯೂಟ ನೌಕರರು, ಆಶಾ ಕಾರ್ಯಕರ್ತೆಯರೂ ಸೇರಿದಂತೆ ಅನೇಕರಿಗೆ ಕನಿಷ್ಠ ವೇತನ ನೀಡುತ್ತಿಲ್ಲ. ಕಾರ್ಮಿಕ ಸಂಘಟನೆಗಳು ನಡೆಸುವ ಹೋರಾಟಗಳಿಗೆ ಸರ್ಕಾರದಿಂದ ಸೂಕ್ತ ರೀತಿಯ ಸ್ಪಂದನೆ ದೊರೆಯುತ್ತಿಲ್ಲ ಎಂದು ಟೀಕಿಸಿದರು.
ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸೌಲಭ್ಯ ಕಲ್ಪಿಸಬೇಕು. ಪ್ರತಿ ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸಬೇಕು. ಮಾರುಕಟ್ಟೆ ಖಾಸಗೀಕರಣ ಕೈಬಿಡಬೇಕು. ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಜಾರಿಗೊಳಿಸಬೇಕು. ಮಹಿಳಾ ಹಮಾಲಿ ಕಾರ್ಮಿಕರಿಗೆ ಪ್ರತ್ಯೇಕ ಸೌಲಭ್ಯ ನೀಡಬೇಕೆಂದು ಹೋರಾಟದ ಮೂಲಕ ಒತ್ತಾಯಿಸಲಾಗುತ್ತದೆ ಎಂದರು.
2 ಸ್ಥಾನ ಮೀಸಲಿಡಿ: ಮಾರುಕಟ್ಟೆ ಸಮಿತಿಯಲ್ಲಿ ಎರಡು ಸ್ಥಾನಗಳನ್ನು ಹಮಾಲಿಗಳಿಗೆ ನೀಡಬೇಕು. ಬೆಲೆಯೇರಿಕೆ ಆಧಾರದಲ್ಲಿ ಪ್ರತಿ 2 ವರ್ಷಕ್ಕೊಮ್ಮೆ ಹಮಾಲಿ ಕೂಲಿ ಪರಿಷ್ಕರಣೆ ನಡೆಸಬೇಕು. ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು. ಪ್ರತಿ ವರ್ಷ ಲೈಸೆನ್ಸ್ ಪಡೆದ ಕಾರ್ಮಿಕರಿಗೆ ಎರಡು ಜೊತೆ ಸಮವಸ್ತ್ರ ನೀಡಬೇಕೆಂದು ಆಗ್ರಹಿಸಲಾಗುತ್ತದೆ ಎಂದು ಹೇಳಿದರು.
23ರಂದು ವಿಧಾನಸೌಧ ಮುತ್ತಿಗೆ: ಅಸಂಘಟಿತ ಕಾರ್ಮಿಕರಿಗೆ ಭದ್ರತೆ, ಕನಿಷ್ಠ ಕೂಲಿ 10 ಸಾವಿರ ನಿಗದಿ, ಗುತ್ತಿಗೆ ಕಾರ್ಮಿಕರ ಪದ್ಧತಿ ರದ್ದತಿ, ಕಾರ್ಮಿಕ ಕಾನೂನುಗಳ ಕಡ್ಡಾಯ ಜಾರಿ, ಬೆಲೆಯೇರಿಕೆ ನಿಯಂತ್ರಣಕ್ಕೆ ಒತ್ತಾಯ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಪಂಚಾಯಿತಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು ಸೇರಿ ವಿವಿಧೆಡೆ ಕಾರ್ಯನಿರ್ವಹಿಸುವ ಕಾರ್ಮಿಕರು ಜ. 23ರಂದು ಬೆಂಗಳೂರಿನ ರೇಲ್ವೆ ನಿಲ್ದಾಣದಿಂದ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆಂದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ, ಡಿ.ಎಸ್. ಶರಣಬಸವ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

