ಸುದ್ದಿ ಸಂಕ್ಷೇಪ
ಇಂದು ಉದ್ಘಾಟನೆ
ರಾಯಚೂರು: ನಗರದಲ್ಲಿ ಆದಾಯ ತೆರಿಗೆ ಇಲಾಖೆಯಿಂದ ಸ್ಥಾಪಿಸಿರುವ ಆದಾಯ ಕರ ಸೇವಾ ಕೇಂದ್ರದ ಉದ್ಘಾಟನೆ ಸಮಾರಂಭ ಜ.10ರಂದು ನಡೆಯಲಿದೆ. ನಗರದ ಅಯ್ಯಪ್ಪಸ್ವಾಮಿ ದೇವಾಲಯದ ಎದುರಿನ ಆದಾಯ ತೆರಿಗೆ ಇಲಾಖೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜ.10ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಕೆ. ಸತ್ಯನಾರಾಯಣ ಕೇಂದ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತ ಪಿ. ಕೆ. ಶರ್ಮಾ ಪಾಲ್ಗೊಳ್ಳಲಿದ್ದಾರೆಂದು ರಾಯಚೂರು ವಲಯದ ಜಂಟಿ ಆಯುಕ್ತ ಕೆ. ವೆಂಕಟರಾಂ ತಿಳಿಸಿದ್ದಾರೆ.
13ಕ್ಕೆ ಜಿಲ್ಲೆಗೆ ಸಿಎಂ
ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು ಜ.13ರಂದು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಅವರು ಬೆಳಗ್ಗೆ 11.45ಕ್ಕೆ ತಿಂಥಿಣಿ ಬ್ರಿಡ್ಜ್ ಹೆಲಿಪ್ಯಾಡಿಗೆ ಆಗಮಿಸಿ ದೇವದುರ್ಗ ತಾಲೂಕಿನ ವೀರಗೋಟ ಗ್ರಾಮಕ್ಕೆ ಆಗಮಿಸುವರು. ನಂತರ ಅವರು ಕೃಷಿ ವಿಶ್ವವಿದ್ಯಾಲಯ, ಹಟ್ಟಿ ಚಿನ್ನದ ಗಣಿ ನಿಯಮಿತ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಸ್ಥಾಪಿಸಿದ ಜೈವಿಕ ಇಂಧನ ಉದ್ಯಾನವನದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಅವರು ಮಧ್ಯಾಹ್ನ 12.15ಕ್ಕೆ ವೀರಗೋಟದ ಕಾಗಿನೆಲೆ ಗುರುಪೀಠದಿಂದ ಆಯೋಜಿಸಿರುವ ಹಾಲುಮತ ಸಂಸ್ಕೃತಿ ವೈಭವ-2014ರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಕ್ಕೆ ಅವರು ಬಳ್ಳಾರಿಗೆ ತೆರಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಜಾತ್ರೆ: ಮದ್ಯ ನಿಷೇಧ
ರಾಯಚೂರು: ಸಿಂಧನೂರು ತಾಲೂಕಿನ ಸೋಮಲಾಪುರದ ಅಂಬಾದೇವಿ ಜಾತ್ರೆ ಜ.16ರಿಂದ 19ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಆದೇಶ ಹೊರಡಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು ಜ.16ರ ಬೆಳಗ್ಗೆ 6 ರಿಂದ ಜ.19ರ ಮಧ್ಯರಾತ್ರಿ 12ರವರೆಗೆ ಸೋಮಲಾಪುರ ಗ್ರಾಮ ಹಾಗೂ ಅದರ ಸುತ್ತಲಿನ 6ಕಿಮೀ ವ್ಯಾಪ್ತಿಯ ಎಲ್ಲ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚಲು ಹಾಗೂ ಹೊರಗಿನಿಂದ ಮದ್ಯ ಸಾಗಿಸಿ ಮಾರಾಟ ಮಾಡುವುದನ್ನು ನಿಷೇಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

