ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ಸಭೆ ನಿರ್ಧಾರ
ಕ.ಪ್ರ. ವಾರ್ತೆ, ರಾಯಚೂರು, ಜ.10
ನಗರ ಸೇರಿ ಜಿಲ್ಲಾದ್ಯಂತ ಜ.21ರಂದು ಶ್ರೀಅಂಬಿಗರ ಚೌಡಯ್ಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಗರದಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಆಮಂತ್ರಣ ಪತ್ರಿಕೆ, ಶಾಮಿಯಾನ ವೇದಿಕೆ ಇತ್ಯಾದಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.
ಜ.21ರಂದು ಬೆಳಗ್ಗೆ 8ಕ್ಕೆ ನಗರದ ಬಿಆರ್ಬಿ ಕಾಲೇಜು ಹತ್ತಿರದ ಶ್ರೀ ಅಂಬಿಗರ ಚೌಡಯ್ಯ ಪುತ್ಥಳಿಗೆ ಗಣ್ಯರಿಂದ ಸಮಾಜದ ಮುಖಂಡರಿಂದ ಮಾಲಾರ್ಪಣೆ. ನಂತರ ಅಲ್ಲಿಂದ ವಿವಿಧ ವಾದ್ಯಮೇಳಗಳ ಮೂಲಕ ಮೆರವಣಿಗೆಯನ್ನು ಹೊರಡಿಸಲು ನಿರ್ಧರಿಸಲಾಯಿತು.
ಮೆರವಣಿಗೆ: ಮೆರವಣಿಗೆಯು ನೇತಾಜಿ ನಗರ, ತೀನ್ ಕಂದೀಲ್, ಬಸ್ ನಿಲ್ದಾಣ, ಡಾ. ಅಂಬೇಡ್ಕರ್ ವೃತ್ತದ ಮೂಲಕ ರಂಗ ಮಂದಿರವನ್ನು ಮಧ್ಯಾಹ್ನ 12ರೊಳಗೆ ತಲುಪಬೇಕು. ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು, ಶ್ರೀ ಆಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ನಂತರ ಅತಿಥಿಗಳಿಂದ ಉಪನ್ಯಾಸ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಮಾಜದ ಮಹನೀಯರಿಗೆ ಸನ್ಮಾನ ಆಯೋಜಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.
ವಚನಗಳ ಪುಸ್ತಕ ವಿತರಣೆ: ತಾಲೂಕು ಮಟ್ಟದಲ್ಲಿ ತಹಸೀಲ್ದಾರ ನೇತೃತ್ವದಲ್ಲಿ ಸಭೆ ನಡೆಸಲು ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆಯಲ್ಲಿರುವ ಗಣ್ಯರಿಗೆ ಶ್ರೀಅಂಬಿಗರ ಚೌಡಯ್ಯನವರ ವಚನಗಳ ಪುಸ್ತಕಗಳನ್ನು ನೀಡಲು ಕ್ರಮ ಜರುಗಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಸಮಾಜದ ಮುಖಂಡರು ಕೋರಿದರು. ಮಹನಿಯರ ಜಯಂತಿಯಂದು ಅಂಬಿಗರ ಚೌಡಯ್ಯ ವ್ಯತ್ತದಲ್ಲಿ ಹಾಗೂ ರಂಗಮಂದಿರ ಹತ್ತಿರ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಗಮನ ಹರಿಸಲು ಜಿಲ್ಲಾಧಿಕಾರಿಗಳು ನಗರಸಭೆಯ ಅಧಿಕಾರಿಗಳಿಗೆ ಆದೇಶಿಸಿದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷ ಕೆ. ಶರಣಪ್ಪ, ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಸಮಾಜದ ಗಣ್ಯರಾದ ಕೆ. ಶಾಂತಪ್ಪ ಹಾಗೂ ಕಡಗೋಲ ಶರಣಪ್ಪ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

