ರಾಯಚೂರು

'ಆರೋಗ್ಯದೆಡೆಗೆ ಗಮನ ನೀಡಿ'

Published On :

ಸಿಂಧನೂರು: ಯುವಕರು ಸದೃಢರಾದರೆ ಮಾತ್ರ ಸದೃಢ ದೇಶ ನಿರ್ಮಾಣವಾಗಲು ಸಾಧ್ಯ. ಆದ್ದರಿಂದ ಹದಿಹರೆಯದ ಯುವಕರು ತಮ್ಮ ಆರೋಗ್ಯಕ್ಕೆ ಹೆಚ್ಚು ಗಮನ ಕೊಡಬೇಕೆಂದು ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಶರಣಪ್ಪ ನಟೇಕಲ್ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹದಿಹರೆಯದವರ ಆರೋಗ್ಯ ಸಮಸ್ಯೆ ಹಾಗೂ ರಕ್ಷಣೆ  ಕುರಿತ ಭಾಷಣ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರೋಗ್ಯಪೂರ್ಣ ಜೀವನ ರೂಢಿಸಿಕೊಳ್ಳಿ: ದೇಶದಲ್ಲಿ ಶೇ.22.1ರಷ್ಟು ಹದಿಹರೆಯರಿದ್ದು, 10- 19 ವಯೋವಾನದವರು ದೈಹಿಕ, ಮಾನಸಿಕ, ಸಾಮಾಜಿಕವಾಗಿ ಹೆಚ್ಚು ವಿಕಾಸ ಹೊಂದುತ್ತಾರೆ. ಅವರ ಬೆಳವಣಿಗೆ ಪ್ರಕ್ರಿಯೆಯಲ್ಲಿ ಅನೇಕ ಸಮಸ್ಯೆಗಳು ಕಾಡಲಿದ್ದು ಅವುಗಳ ದುಷ್ಪರಿಣಾಮಗಳಿಂದ ಮುಕ್ತರಾಗಲು ಸೂಕ್ತ ಸಲಹೆ, ಮಾರ್ಗದರ್ಶನ ಪಡೆದು ಆರೋಗ್ಯ ಪೂರ್ಣ ಜೀವನ ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಮಾತನಾಡಿದರು. ಬಾಲಕರ ಸರ್ಕಾರಿ ಪಪೂ ಕಾಲೇಜು ಪ್ರಾಚಾರ್ಯ ಕೆ.ಎಂ. ಶರಣಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕರಾದ ಶಿವಮ್ಮ ಕಂಬಳಿ, ಜ್ಯೋತಿ, ಜಗದೀಶ ಬಿ.ಎಸ್. ಅಂಗಡಿ, ಶಿವಶಂಕರಪ್ಪ, ಕೃಷ್ಣಾರೆಡ್ಡಿ ಮತ್ತಿತರರಿದ್ದರು. ಶ್ರೀದೇವಿ ಸ್ವಾಗತಿಸಿದರು. ಚನ್ನಬಸಪ್ಪ ವಂದಿಸಿದರು.
ಬಹುಮಾನ: ಭಾಷಣ ಸ್ಪರ್ಧೆಯಲ್ಲಿ ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿಗಳಾದ ಶಬಾನ ಪ್ರಥಮ, ಲಕ್ಷ್ಮೀ ತೃತೀಯ ಹಾಗೂ ವಾಸವಿ ಸ್ವತಂತ್ರ ಪಪೂ ಕಾಲೇಜಿನ ಶಮ್ರಿನ್ ಬೇಗಂ ದ್ವಿತೀಯ ಬಹುಮಾನ ಪಡೆದರು. ವಿಜೇತರಿಗೆ ಇಲಾಖೆಯಿಂದ ಪ್ರಶಸ್ತಿ ಪತ್ರ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.