ರಾಯಚೂರು

ಯುವಜನೋತ್ಸವ; ರಾಜ್ಯಮಟ್ಟಕ್ಕೆ ಆಯ್ಕೆ

Published On :

ಸಿಂಧನೂರು: ನಗರದ ಸರ್ಕಾರಿ ಮಹಾವಿದ್ಯಾಲಯದ ಪದವಿ ವಿದ್ಯಾರ್ಥಿಗಳಾದ ಚಾಂದಬೀ, ವಿರೂಪಾಕ್ಷಿ ಪತ್ತಾರ, ಅವರು ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಜ.18ರಿಂದ 22ರವರೆಗೆ ನಡೆಯುವ ರಾಜ್ಯಮಟ್ಟದ ಎನ್ನೆಸ್ಸೆಸ್ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರಹ್ಲಾದರಡ್ಡಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧೆನೆಗೆ ಎನ್ನೆಸ್ಸೆಸ್ ಅಧಿಕಾರಿ ವೆಂಕಟನಾರಾಯಣ ಹಾಗೂ ಬೋಧಕ ಸಿಬ್ಬಂದಿ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಸ್ಪರ್ಧಾ ಜಗತ್ತನ್ನು ಎದುರಿಸಲು ಸಿದ್ಧರಾಗಿ
ಸಿಂಧನೂರು: ಬಹುತೇಕ ಕ್ಷೇತ್ರಗಳಲ್ಲಿ ಮಹಿಳೆಯರು ದಾಪಗಾಲು ಹಾಕಿದ್ದು, ಇದರ ಸವಾಲನ್ನೆದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿನಿಯರು ಸಂಪಾದಿಸಿಕೊಳ್ಳುವತ್ತ ಗಮನ ಹರಿಸಬೇಕೆಂದು ದುದ್ದುಪುಡಿ ಕಾಲೇಜಿನ ಉಪನ್ಯಾಸಕ ಗಂಗಮ್ಮ ತಿಳಿಸಿದರು. ನಗರದ ಅನಿಕೇತನ ಸ್ವತಂತ್ರ ಪಪೂ ಕಾಲೇಜಿನಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಎಕ್ಸ್ಲೆಂಟ್ ಕಾಲೇಜಿನ ವಿದ್ಯಾರ್ಥಿನಿಯರ ತಂಡಕ್ಕೆ 1,005, ದ್ವಿತೀಯ ಬಹುಮಾನ ಪಡೆದ ಜ್ಞಾನಜ್ಯೋತಿ ಕಾಲೇಜಿನ ವಿದ್ಯಾರ್ಥಿನಿಯರ ತಂಡಕ್ಕೆ 705, ತೃತೀಯ ಬಹುಮಾನ ಪಡೆದ ಶಾರದಾ ಕಾಲೇಜು ತಂಡಕ್ಕೆ 505 ವಿತರಿಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.