ರಾಯಚೂರು

ಎಸ್ಡಿಎಂಸಿಗೆ ಆಯ್ಕೆ

Published On :

ರಾಯಚೂರು: ನಗರದ ಸಿಯಾತಲಾಬ್ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಾಮಸುಂದರ್, ಉಪಾಧ್ಯಕ್ಷರಾಗಿ ವೈಕುಂಠಮ್ಮ ಆಯ್ಕೆಯಾದರು. ಈ ಕುರಿತು ನಡೆದ ಪಾಲಕರಿದ್ದ ಆಯ್ಕೆ ಸಭೆಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಯುಸೂಫ್ ಖಾನ್, ಆರ್.ತಿಮ್ಮಯ್ಯ, ಶಂಕ್ರಣ್ಣ ಅದೋನಿ, ಆರ್.ಮಾನಸಯ್ಯ, ಗೋಪಾಲಸಿಂಗ್, ಲಕ್ಷ್ಮಣ ಮೇದಾರ್, ಎಂ. ವೀರಯ್ಯ, ಕೆ.ಇ. ಕುಮಾರ್, ಚಂದ್ರಪ್ಪ ಆದೋನಿ, ವೆಂಕಟಸ್ವಾಮಿ ಸೇರಿದಂತೆ ಅನೇಕರಿದ್ದರು. ಸಿಯಾತಲಾಬ್ ಶಾಲೆಯ ಬೋಧಕ ವರ್ಗದವರು ಇದ್ದರು.


ಕಾಂಗ್ರೆಸ್ಗೆ ನೇಮಕ
ರಾಯಚೂರು: ನಗರ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ನಗರ ಘಟಕದ ಅಧ್ಯಕ್ಷರನ್ನಾಗಿ ತಿಮ್ಮಪ್ಪ ನಾಯಕ ನೇಮಕಗೊಂಡಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ರವಿ ಪಾಟೀಲ್ ಅವರು, ತಿಮ್ಮಪ್ಪ ನಾಯಕ ಅವರು ಕೂಡಲೇ ಜವಾಬ್ದಾರಿಯನ್ನು ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.


ಘರ್ಷಣೆ; ಗಾಯಾಳು ಸಾವು
ರಾಯಚೂರು: ಮಾನವಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದ್ದ ಎರಡು ಗುಂಪುಗಳ ಮಧ್ಯದ ಘರ್ಷಣೆಯಲ್ಲಿ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ವೇಳೆ ಸಾವಿಗೀಡಾಗಿದ್ದಾನೆ. ಮೃತನನ್ನು ಅಶೋಕ(25) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಹಳೆಯ ದ್ವೇಷದಿಂದ ನಡೆದಿದ್ದ ಘರ್ಷಣೆಯಲ್ಲಿ ಈತ ತೀವ್ರ ಗಾಯಗೊಂಡಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ಬೆಳಗ್ಗೆ ಈತ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಿರವಾರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.