ರಾಯಚೂರು

ಸೆಮಿಸ್ಟರ್ ಪದ್ಧತಿ ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆ

Published On :

ಸಿಂಧನೂರು: ಐಟಿಐನಲ್ಲಿ ಏಕಾಏಕಿ ಸೆಮಿಸ್ಟರ್ ಪದ್ಧತಿ ಜಾರಿಗೊಳಿಸಿರುವುದನ್ನು ಖಂಡಿಸಿ ಎಐಡಿವೈಒ ಹಾಗೂ ಎಐಡಿಎಸ್ಓ ಸಂಘಟನೆಗಳ ನೇತೃತ್ವದಲ್ಲಿ ಸ್ಥಳೀಯ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ವೆಂಕನಗೌಡ.ಆರ್. ಪಾಟೀಲ್ ಮೂಲಕ ಡೈರೆಕ್ಟರ್ ಜನರಲ್ ಆಫ್ ಎಂಪ್ಲಾಯ್ಮೆಂಟ್ ಟ್ರೈನಿಂಗ್, ನವದೆಹಲಿ ಅವರಿಗೆ ಮನವಿ ಸಲ್ಲಿಸಿದರು. ವಳಬಳ್ಳಾರಿ ಚನ್ನಬಸವೇಶ್ವರ ಕೈಗಾರಿಕಾ ತರಬೇತಿ ಕೇಂದ್ರದಿಂದ ಆರಂಭವಾದ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ ಪ್ರವಾಸಿ ಮಂದಿರ, ಗಾಂಧಿ ಸರ್ಕಲ್ ಮೂಲಕ ತಹಸೀಲ್ದಾರ್ ಕಾರ್ಯಾಲಯ ತಲುಪಿತು. ಮೆರವಣಿಗೆಯುದ್ದಕ್ಕೂ ವಿದ್ಯಾರ್ಥಿಗಳು ಸೆಮಿಸ್ಟರ್ ಪದ್ಧತಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಎಐಡಿವೈಓ ಜಿಲ್ಲಾಧ್ಯಕ್ಷ ಶರಣಪ್ಪ ಉದ್ಬಾಳ ಮಾತನಾಡಿದರು.
ಮಾಹಿತಿ ತಲುಪಿಸಿಲ್ಲ: ಎರಡು ವರ್ಷಗಳ ಹಿಂದೆಯೇ ಎನ್ಸಿವಿಟಿ 39ನೇ ಸಭೆಯು ಸೆಮಿಸ್ಟರ್ ಪದ್ಧತಿಯನ್ನು ನಿರ್ಧರಿಸಿದ್ದು, ಪಠ್ಯಕ್ರಮ, ಪರೀಕ್ಷಾ ವಿಧಾನ, ತರಬೇತಿಗೆ ಅಗತ್ಯವಾದ ಪರಿಕರಗಳು ಹಾಗೂ ಇತರೆ ಸಂಪನ್ಮೂಲಗಳು, ತರಬೇತಿ ನೀಡುವವರ ಅರ್ಹತೆ ಮುಂತಾದ ಅಂಶಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ಎಲ್ಲರಿಗೂ ತಲುಪಿಸಿಲ್ಲ. ಮಾಹಿತಿ ನೀಡಲು ಇಷ್ಟು ತಡ ಮಾಡಿದರ ಉದ್ದೇಶವೇನು ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.