'ಎಲ್ಲೆಡೆ ಕನ್ನಡ ಪದ ಬಳಕೆಯಾಗಲಿ'
ಸಿಂಧನೂರು: ಕರ್ನಾಟಕ ನಮ್ಮ ರಾಜ್ಯ. ಕನ್ನಡ ನಮ್ಮೆಲ್ಲರ ತಾಯಿ ಭಾಷೆಯಾಗಿದ್ದು, ವಿದ್ಯಾರ್ಥಿಗಳು ಮನೆಯಲ್ಲಿ ಶಾಲೆಯಲ್ಲಿ ಹಾಗೂ ಸಮುದಾಯದೊಂದಿಗೆ ಮಾತನಾಡುವಾಗ ಎಲ್ಲ ಕಡೆಗೆ ಹೆಚ್ಚು ಹೆಚ್ಚು ಕನ್ನಡ ಭಾಷೆಯ ಪದಗಳನ್ನು, ಬಳಸಿ ಮಾತನಾಡುವುದರಿಂದ ಕನ್ನಡದ ಶಬ್ದಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ ಐಡಿಯಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಬಾಬರ್ ಪಾಷಾ ಹೇಳಿದರು.
ನಗರದ ಉರ್ದು ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಿರಿಗಂಧ ಕನ್ನಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನವರು ಸಿರಿಗಂಧ ಕನ್ನಡ ಕಾರ್ಯಕ್ರಮದಲ್ಲಿ ಉರ್ದು ಪ್ರೌಢಶಾಲೆಯನ್ನು ಆಯ್ಕೆ ಮಾಡಿ ಕೊಂಡು ಇಲ್ಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿರುವುದು ಶ್ಲಾಘನೀಯವೆಂದರು.
ಉರ್ದು ವಿದ್ಯಾರ್ಥಿಗಳಿಗೆ ಅವಕಾಶ ಕೊಡಿ: ಮುಂದೆ ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಕಸಾಪ ಜಿಲ್ಲಾ ಗೌರವಾಧ್ಯಕ್ಷ ಎಸ್.ಶರಣೇಗೌಡ ಮಾತನಾಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತಿ ಶನಿವಾರ ಸಿರಿಗಂಧ ಕನ್ನಡ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಹೆಚ್ಚಿನ ಒಲವು ಮೂಡಿಸುತ್ತಿರುವುದು ಒಳ್ಳೆಯದಾಗಿದೆ ಎಂದು ಹೇಳಿದರು.
ಸಿರಿಗಂಧ ಕನ್ನಡದ ಉದ್ದೇಶ: ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ಮಾತನಾಡಿ, ಎಲ್ಲರೂ ದೈನಂದಿನ ವ್ಯವಹಾರಗಳಲ್ಲಿ ಸಾಧ್ಯವಾದಷ್ಟು ಕನ್ನಡದ ಪದಗಳ ಬಳಕೆ ಮಾಡಬೇಕೆಂದು ತಿಳಿಸಿ, ಇದು ವಿದ್ಯಾರ್ಥಿ ದೆಸೆಯಿಂದಲೇ ಪ್ರಾರಂಭವಾದರೆ ಒಳ್ಳೆಯದು ಎನ್ನುವ ದೃಷ್ಟಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿರಿಗಂಧ ಕನ್ನಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರ ಸೈಯದ್ ಖಾದರ ಸುಭಾನಿ ಮಾತನಾಡಿ, ಜಗತ್ತಿನಲ್ಲಿಯೇ ಕನ್ನಡ ಭಾಷೆಯನ್ನು ಮಾತನಾಡುವುದು ಬಹಳ ಸುಲಭವಾಗಿದೆ.
ಬರೆದಿರುವ ಶಬ್ದಗಳನ್ನು ಉಚ್ಚರಿಸುವುದು ಸರಳವಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆ, ನಾಡನ್ನು ಪ್ರೀತಿ- ಗೌರವದಿಂದ ಕಾಣಬೇಕೆಂದು ಸಲಹೆ ನೀಡಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ದೇವೇಂದ್ರಗೌಡ, ಉರ್ದು ಪ್ರೌಢಶಾಲೆಯ ಮುಖ್ಯಗುರು ಸೈಯದ್ಅಬ್ರಾಹರ್ಅಹ್ಮದ್, ಚುಸಾಪ ಜಿಲ್ಲಾಧ್ಯಕ್ಷ ಬೀರಪ್ಪ ಶಂಭೋಜಿ, ತಾಲೂಕ ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ, ಶಹೀದಾ ಬೇಗಮ್, ಮಹ್ಮದ್ ರಫೀಕ್, ಸೈಯದ್ ಹಸನ್ ಮುಲ್ಲಾ ಉಪಸ್ಥಿತರಿದ್ದರು. ಸಬಿಯಾ ಪ್ರಾರ್ಥಿಸಿದರು. ಮೊಹ್ಮದ್ ಇಬ್ರಾಹಿಂ ಸ್ವಾಗತಿಸಿದರು. ಬೀರಪ್ಪ ಶಂಭೋಜಿ ನಿರೂಪಿಸಿದರು. ಸೈಯದ್ ಶಂಶುದ್ದೀನ್ ವಂದಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಸಿರಿಗಂಧ ಕನ್ನಡ ಕಾರ್ಯಕ್ರಮದಲ್ಲಿ ಸೈಯದ್ ಮುಸ್ತಾಫಾ ಪ್ರಥಮ, ರುಬಿಯಾ ಬೇಗಂ ದ್ವಿತೀಯ ಹಾಗೂ ಅಸ್ಮಾ ತೃತೀಯ ಸ್ಥಾನ ಪಡೆದು ಪ್ರಶಸ್ತಿ ಪತ್ರ ಹಾಗೂ ಬಹುಮಾನ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

