ರಾಯಚೂರು

ಸಂಚಾರ ನಿಯಮ ಪಾಲಿಸಿದ್ರೆ ಅಪಘಾತ ತಡೆ: ಎಸ್ಪಿ ಅಶೋಕ

Published On :

ರಾಯಚೂರು: ಸಂಚಾರ ನಿಯಮಗಳ ಉಲ್ಲಂಘನೆಯಿಂದಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ನಿಯಮ ಪಾಲನೆ ಮೂಲಕ ಅಪಘಾತಗಳಿಗೆ ತಡೆಹಾಕುವಂತೆ ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ ಕರೆ ನೀಡಿದರು.
ನಗರದ ಗಂಜ್ ವೃತ್ತದಲ್ಲಿ ಭಾನುವಾರ ಬೆಳಗ್ಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ 2ನೇ ದಿನ ಆಯೋಜಿಸಿದ್ದ ಮ್ಯಾರಾಥಾನ್‌ಗೆ ಚಾಲನೆ ನೀಡಿ ಮಾತನಾಡಿ, ವಾಹನಗಳನ್ನು ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವುದು ಅಪಘಾತಕ್ಕೆ ದಾರಿ ಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಸ್ತೆ ಸುರಕ್ಷತಾ ಸಪ್ತಾಹದ ಸಂದರ್ಭದಲ್ಲಿ ಜನರಲ್ಲಿ ಸಂಚಾರ ನಿಯಮಗಳ ಪಾಲನೆ ಮತ್ತು ಅದರಿಂದಾಗುವ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದ ಅವರು, ಅಪಘಾತ ತಡೆಯುವ ನಿಟ್ಟಿನಲ್ಲಿ ಜನತೆ ಸಹಕರಿಸುವಂತೆ ಮನವಿ ಮಾಡಿದರು.ಡಿವೈಎಸ್ಪಿ ಎಂ.ಪಾಷಾ ಸೇರಿದಂತೆ ಸಂಚಾರ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.