ರಾಯಚೂರು

ಮುಖ್ಯಮಂತ್ರಿಯಿಂದ ಉತ್ತಮ ಕಾರ್ಯ; ಶರಣರ ಮೆಚ್ಚುಗೆ

Published On :


ದೇವದುರ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಹಿನ್ನೆಲೆಯುಳ್ಳವರಾಗಿದ್ದು, ಅವರು ಸಮಾಜದ ಕೆಳವರ್ಗದವರ ಪರ ನಿಲುವು ಹೊಂದಿದ್ದಾರೆ. ಅವರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದು ಅವರಿಗೆ ಬೆಂಬಲ ನೀಡುವಂತೆ ಚಿತ್ರದುರ್ಗದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಸಲಹೆ ನೀಡಿದರು. ತಾಲೂಕಿನ ವೀರಗೋಟದಲ್ಲಿ ಸೋಮವಾರ ಆರಂಭಗೊಂಡ ಹಾಲುಮತ ಸಂಸ್ಕೃತಿ ವೈಭವದ ಉದ್ಘಾಟನೆ  ಸಮಾರಂಭದಲ್ಲಿ ಮಾತನಾಡಿ, ಸರ್ಕಾರ ಶೋಷಿತ, ಬಡವರ ಹಾಗೂ ಜನಸಾಮಾನ್ಯರ ಪರ ಯೋಜನೆ ಜಾರಿಗೆ ತರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾಡಿನಲ್ಲಿ ಮಠಗಳು ಸಾಕಷ್ಟು ಸಂಖ್ಯೆಯಲ್ಲಿವೆ. ಅವುಗಳಲ್ಲಿ ಹಾಲುಮತ ಸಮಾಜಕ್ಕೆ ತನ್ನದೇ ಆದ ಪರಂಪರೆಯಿದೆ. ಡೊಳ್ಳು ಕುಣಿತ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಇಂಥ ಸಮಾಜದಿಂದ ಬಂದಿರುವ ಸಿಎಂ ನಾಡಿನ ಸಮಗ್ರ ಪ್ರಗತಿಗೆ ಶ್ರಮಿಸುತ್ತಿದ್ದಾರೆಂದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.