ರಾಯಚೂರು

ಸರ್ವರ ಪರಿಶ್ರಮವೇ ಸಂಘದ ಶ್ರೇಯಸ್ಸಿಗೆ ಪೂರಕ: ಬಾದರ್ಲಿ

Published On :

ಶಹಾಪುರ: ಸಿಂಧನೂರಿನ ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘವು ಬೆಳೆಯಲು ಸರ್ವರ ಪರಿಶ್ರಮವೇ ಸಂಘದ ಶ್ರೇಯಸ್ಸಿಗೆ ಪೂರಕ ಎಂದು ಸಿಂಧನೂರ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಪಟ್ಟಣದ ಜೀವ್ಹೇಶ್ವರ ನಗರದಲ್ಲಿ ಕಾರ್ಯಾರಂಭ ಮಾಡಿರುವ ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು. ಸಹಕಾರ ಕ್ಷೇತ್ರದಲ್ಲಿ ಸಂಸ್ಥೆಯು ಉತ್ತಮ ಸಾಧನೆ ಮಾಡಿದೆ. ಅವಕಾಶಗಳಿದ್ದಾಗ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮನಸ್ಸುಗಳಿರಬೇಕು. ಅದಕ್ಕಾಗಿಯೇ ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಸ್ಥೆಯು ತನ್ನದೆಯಾದ ಕೊಡುಗೆಯನ್ನು ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದೆ ಎಂದರು.  ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಉತ್ತಮ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪರಿಶ್ರಮವೇ ಸಂಸ್ಥೆಯ ಅಭಿವೃದ್ಧಿಗೆ ಕಾರಣ. ಸಂಸ್ಥೆಯಿಂದ ಪಡೆದ ಸಾಲವನ್ನು ಸದಸ್ಯರು ಅಲ್ಲದೆ ಸಾಲ ಪಡೆದ ಗ್ರಾಹಕರು ಸಾಲ ಮರುಪಾವತಿ ಮಾಡುವುದು ಅಷ್ಟೇ ಜವಾಬ್ದಾರಿಯುತ ಕೆಲಸ ಎಂದರು.  ಬೆಂಗಳೂರಿನ ಸಹಕಾರಿ ಸಂಘದ ಅಧ್ಯಕ್ಷ ಗುರುನಾಥ ಜ್ಯಾಂತಿಕರ ಮಾತನಾಡಿದರು. ಸಹಕಾರಿ ಸಂಘದ ಅಧ್ಯಕ್ಷ ಸಿಂಹಾದ್ರಿ ಸತ್ಯನಾರಾಯಣ, ಉಪಾಧ್ಯಕ್ಷ ಪಂಪನಗೌಡ ಮಾಲಿಮಾಟೀಲ, ನಿರ್ದೇಶಕರಾದ ಅಮರೇಗೌಡ ಮಾಲಿಪಾಟೀಲ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.