ರಾಯಚೂರು

ಮಸ್ಕಿ; ಫೆ.11ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Published On :

ಮಸ್ಕಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.11 ಮತ್ತು ಫೆ.12ರಂದು ಮಸ್ಕಿಯಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಫೆ.11ರಂದು ಸಾಹಿತ್ಯ ಸಮ್ಮೇಳನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಖ್ಯಾತ ಸಾಹಿತಿ ನಾ. ಡಿಸೋಜಾ ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ನಾಡಿನ ಹಿರಿಯ ಸಾಹಿತಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ಮಸ್ಕಿ ಪಟ್ಟಣದ ಸಿಪಿಐ ಕಚೇರಿಯ ಪಕ್ಕದಲ್ಲಿನ ವಿಶಾಲ ಮೈದಾನದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದ್ದು, 1500 ಸಾಹಿತ್ಯ ಪ್ರತಿನಿಧಿಗಳು ಹಾಗೂ 3 ಸಾವಿರ ಜನ ಸಾಹಿತ್ಯಾಭಿಮಾನಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮ್ಮೇಳನದಲ್ಲಿ ಕೃಷಿ, ವಿಜ್ಞಾನ, ಕಾವ್ಯ ಕಮ್ಮಟ ಮತ್ತಿತರೆ ಗೋಷ್ಠಿಗಳು ಆಯೋಜಿಸಲಾಗುತ್ತದೆ ಎಂದು ಹೇಳಿದರು.
ಸಮ್ಮೇಳನದಲ್ಲಿ ಸಾಹಿತ್ಯಿಕ ಪುಸ್ತಕ ಹಾಗೂ ಕರಕುಶಲ ವಸ್ತುಗಳ ಮಾರಾಟ ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಊಟ ಹಾಗೂ ವಸತಿಗಾಗಿ ಸಾಹಿತ್ಯ ಪ್ರತಿನಿಧಿಗಳಿಗೆ 150 ಶುಲ್ಕ ನಿಗದಿ ಮಾಡಲಾಗಿದೆ. ಸರ್ಕಾರಿ ನೌಕರರು ಪಾಲ್ಗೊಳ್ಳಲು 2 ದಿನಗಳ ಒಒಡಿ ಸೌಲಭ್ಯ ಒದಗಿಸಲಾಗುವುದು. ಸಮ್ಮೇಳನವು ಯಶಸ್ವಿಗೊಳ್ಳಲು ಜಿಲ್ಲೆಯ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹಾಂತೇಶ ಮಸ್ಕಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ದೇವೇಂದ್ರ ಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಶರಣೇಗೌಡ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.