ರಾಯಚೂರು

ಹೊಸ ವರ್ಷ; ವ್ಯಾಯಾಮ ಶಾಲೆಯಿಂದ ನಾಳೆ ಸ್ಪರ್ಧೆ

Published On :

ರಾಯಚೂರು: ನಗರದ ಜಹೀರಾಬಾದ್‌ನ ಜೈ ವೀರ ಹನುಮಾನ್ ವ್ಯಾಯಾಮ ಶಾಲೆದಿಂದ ಹೊಸ ವರ್ಷದ ಅಂಗವಾಗಿ ಜ.16ರಂದು ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವ್ಯಾಯಾಮ ಶಾಲೆಯ ಪ್ರಮುಖ ಭಾಸ್ಕರಬಾಬು ಹೇಳಿದರು.
ನಗರದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.16ರಂದು ಬೆಳಗ್ಗೆ 10ಕ್ಕೆ ಈ ಸ್ಪರ್ಧೆಗಳ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ನಗರಸಭೆ ಅಧ್ಯಕ್ಷೆ ಮಹಾದೇವಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ವ್ಯಾಯಾಮ ಶಾಲೆಯು ಕಳೆದ ಅನೇಕ ದಶಕಗಳಿಂದ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಳುಗಳನ್ನು ನೀಡಿದೆ ದೇಹದಾರ್ಢ್ಯ ಸ್ಪರ್ಧೆಗಳು, ಭಾರ ಎತ್ತುವ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜ.16ರಂದು ಬೆಳಗ್ಗೆ 10ಕ್ಕೆ ಹಗ್ಗ ಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಯಸುವ 9 ಜನರ ಗುಂಪು ಕಡ್ಡಾಯವಾಗಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವವರು ತಮ್ಮ ಹೆಸರನ್ನು ಮುಂಚಿತವಾಗಿಯೇ ನೋಂದಾಯಿಸಿಕೊಳ್ಳಲು ಅವರು ಮನವಿ ಮಾಡಿದರು. ಅದೇ ರೀತಿ ಡೆಡ್ ಲಿಫ್ಟಿಂಗ್ ಸ್ಪರ್ಧೆ ಮಧ್ಯಾಹ್ನ 12ಕ್ಕೆ ನಡೆಯಲಿದ್ದು, ಈ ವೇಳೆ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುತ್ತದೆ. ಅದೇ ರೀತಿ ಸಂಜೆ 7.30ಕ್ಕೆ ಭಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ತಿಳಿಸಿದರು. ವ್ಯಾಯಾಮ ಶಾಲೆಯ ಅಧ್ಯಕ್ಷ ಬಿ.ಎನ್. ಶಂಶಾಲಪ್ಪ, ಕಾರ್ಯದರ್ಶಿ ಬಸವರಾಜ್, ಎಸ್. ನರಸಪ್ಪ, ಕೆ. ರಂಗನಾಥ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.