17ರಂದು ಮಾದಿಗ ನೌಕರರ ಐಕ್ಯತಾ ಸಮಾವೇಶ
ಸಿಂಧನೂರು: ನಗರದ ಸತ್ಯಗಾರ್ಡನ್ನಲ್ಲಿ ಜ.17 ಶುಕ್ರವಾರ ಮಧ್ಯಾಹ್ನ 2ಕ್ಕೆ ಮಾದಿಗ ಛಲವಾದಿ ನೌಕರರ ಜಿಲ್ಲಾ ಮಟ್ಟದ ಐಕ್ಯತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಮಾದಿಗ ನೌಕರರ ಸಂಘದ ಕೋಶಾಧ್ಯಕ್ಷ ದುರುಗಪ್ಪ ಹಸಮಕಲ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ, ನಿಡುಮಾಮಿಡಿ ಸಂಸ್ಥಾನಮಠದ ವೀರಭದ್ರ ಚನ್ನಮಲ್ಲ ಶ್ರೀ, ಕೋಟಿಹಳ್ಳಿ ಬೃಹನ್ ಮಠದ ಮಾರ್ಕಂಡಮುಬಿ ಶ್ರೀ, ಮೈಸೂರಿನ ಉರಿಲಿಂಗಪೆದ್ದಿ ಜ್ಞಾನಪ್ರಕಾಶ ಶ್ರೀ ಕಾರ್ಯಕ್ರಮದ ಸಾನಿಧ್ಯ ವಹಿಸಿಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ, ಲೋಕೋಪಯೋಗಿ ಸಚಿವ ಡಾ. ಮಹಾದೇವಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಜಿಪಂ ಅಧ್ಯಕ್ಷೆ ಲಲಿತಮ್ಮ ಲಿಂಗರಾಜ, ಪ್ರಿಯಾಂಕ ಖರ್ಗೆ ಸೇರಿದಂತೆ ಸಂಸದರು, ಶಾಸಕರು, ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆಂದರು.
ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರನ್ನು (ತಾಲೂಕಿಗೆ ಇಬ್ಬರಂತೆ) ಗುರುತಿಸಿ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜೊತೆಯಲ್ಲಿ ಸಮಾಜದ ಹೋರಾಟಗಾರರ, ಸಂಘ-ಸಂಸ್ಥೆಯ ಮುಖಂಡರಿಗೆ(ತಾಲೂಕಿಗೆ ಇಬ್ಬರಂತೆ) ಸಂಘರ್ಷ ರತ್ನ ಪ್ರಶಸ್ತಿ ನೀಡಿಲಾಗುವುದು.
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ನೌಕರರಿಗೆ ಮುಂಬಡ್ತಿ ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು. 371(ಜೆ) ಕಲಂ ಕೂಡಲೇ ಜಾರಿಗೊಳಿಸಿ, ಎಲ್ಲಾ ಇಲಾಖೆಗಳ ದಿನಗೂಲಿ ನೌಕರರನ್ನು ಖಾಯಂಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ನೌಕರರನ್ನು ಖಾಯಂಗೊಳಿಸಿ, ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು. ಅತಿಥಿ ಉಪನ್ಯಾಸಕರ, ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸಬೇಕು. ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ಇದ್ದು, ಹಾಸ್ಟೆಲ್ ವ್ಯವಸ್ಥೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಲಾಗುವುದು ಎಂದರು. ಯಮನಪ್ಪ, ಯಲ್ಲಪ್ಪ, ಎಸ್.ಆರ್. ಅಗಸಬಾಳ, ಏಳುಕೋಟೆಪ್ಪ ಪಾಟೀಲ್, ಮಂಜುನಾಥ, ಎಂ.ಬಿ. ದೊಡ್ಡಮನಿ, ಮಸ್ಕಿಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

