ರಾಯಚೂರು

ಮಟಮಾರಿ; ನಾಳೆ ಮಹಾರಥೋತ್ಸವ

Published On :

ರಾಯಚೂರು: ತಾಲೂಕಿನ ಮಟಮಾರಿ ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಜ.16ರಂದು ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ಬಿಚ್ಚಾಲಿ ಸಾವಿರ ದೇವರ ಸಂಸ್ಥಾನಮಠ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ಜ.16ರಂದು ನಡೆಯುವ ಜಾತ್ರಾ ಮಹೋತ್ಸವದಲ್ಲಿ ಮಾನವಿಯ ಕಲ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯರು, ಕಿಲ್ಲೆ ಮಠದ ಶಾಂತಮಲ್ಲ ಶಿವಾಚಾರ್ಯರು, ಸೋಮವಾರಪೇಟೆಯ ಅಭಿನವ ರಾಚೋಟಿ ವೀರಶಿವಾಚಾರ್ಯರು, ಗಬ್ಬೂರಿನ ಬೂದಿ ಬಸವೇಶ್ವರ ಶಿವಾಚಾರ್ಯರು, ನೀಲಗಲ್ ಮಠದ ಪಂಚಾಕ್ಷರಿ ಶಿವಾಚಾರ್ಯರು, ವೀರಸಂಗಮೇಶ್ವರ ಮರಿದೇವರ ಸಾನ್ನಿಧ್ಯದಲ್ಲಿ ನಡೆಯಲಿದೆ.ಜ.16ರಂದು ಬೆಳಗ್ಗೆ ವೀರಭದ್ರ ದೇವರಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಹಾಗೂ ಸಂಜೆ 5.10ಕ್ಕೆ ವೀರಭದ್ರೇಶ್ವರ ರಥೋತ್ಸವ ನಡೆಯಲಿದೆ. ರಾತ್ರಿ 9ರಿಂದ ಅಹೋರಾತ್ರಿ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.17ರಂದು ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ, ಸಂಜೆ 4ಕ್ಕೆ ಶಕ್ತಿ ಪ್ರದರ್ಶನ ಆಯೋಜಿಸಿದೆ.
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ರಾಯಚೂರು: ತಾಲೂಕಿನ ಬಿಜನಗೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಗ್ರಾಮದ ಶಾಲೆಯ ಭೂದಾನಿ ವೆಂಕಟರೆಡ್ಡಿ ಹಾಗೂ ತಾಪಂ ಸದಸ್ಯ ನೋಹನ್ ಅವರು ಸೈಕಲ್ ವಿತರಿಸಿ ಮಾತನಾಡಿದರು. ಶಾಲೆಯ ಮುಖ್ಯ ಗುರು ಶೈಲಜಾ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕ ರಾಜಶೇಖರ್, ವಾಸಂತಿ ಸೇರಿದಂತೆ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳಿದ್ದರು.
ಡಿಕ್ಕಿ: ಇಬ್ಬರ ಸಾವು
ರಾಯಚೂರು: ಲಿಂಗಸ್ಗೂರು ತಾಲೂಕಿನ ಗೊಲಪಲ್ಲಿ ಬಳಿ ಬೈಕ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಮೃತರನ್ನು ಅಮರೇಶ್(35) ಮತ್ತು ಆತನ ಮಗ ಮಣಿಕಂಠ(4) ಎಂದು ಗುರುತಿಸಲಾಗಿದೆ. ಮೃತರನ್ನು ಲಿಂಗಸ್ಗೂರು ತಾಲೂಕಿನ ಖೈರವಾಡಿಗಿ ಗ್ರಾಮದವರೆಂದು ಗೊತ್ತಾಗಿದೆ. ಬೈಕ್‌ನಲ್ಲಿದ್ದ ಅಮರೇಶ್ ಅವರ ಪತ್ನಿ ಮತ್ತು ಅವರ ಮತ್ತಿಬ್ಬರು ಮಕ್ಕಳು ತೀವ್ರ ಗಾಯಗೊಂಡಿದ್ದು ಬಾಗಲಕೋಟೆ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.