ಸಿಂಧನೂರು; ನಾಳೆ ದತ್ತಿ ಉಪನ್ಯಾಸ
ಸಿಂಧನೂರು: ನಗರದ ನ್ಯಾಷನಲ್ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಜ.16 ರಂದು ಗುರುವಾರ ಬೆಳಿಗ್ಗೆ 8.30 ಕ್ಕೆ ಹಮ್ಮಿಕೊಳ್ಳಲಾಗಿದೆಯೆಂದು ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ತಿಳಿಸಿದ್ದಾರೆ. ಕಾರ್ಯಕ್ರಮನ್ನು ಆರ್ಜಿಎಂ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ ಹಾಗೂ ತಾಲೂಕ ಕಸಾಪ ಗೌರವ ಸಲಹೆಗಾರರಾದ ಡಾ. ಮಧುಮತಿ ದೇಶಪಾಂಡೆ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ನ್ಯಾಷನಲ್ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಶರಣಪ್ಪ ವಹಿಸಲಿದ್ದಾರೆ. ದಿ. ಕೆ. ವಿಜಯಕುಮಾರ ಸ್ಮಾರಕ ದತ್ತಿಯ ಉಪನ್ಯಾಸವನ್ನು ಕನ್ನಡ ಸಾಹಿತ್ಯದಲ್ಲಿ ಜನಪ್ರಿಯತೆ ವಿಷಯ ಕುರಿತು ಜಿಲ್ಲಾ ಚುಸಾಪ ಅಧ್ಯಕ್ಷ ಬೀರಪ್ಪ ಶಂಭೋಜಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದತ್ತಿ ದಾನಿ ಕೆ. ಚಂದ್ರಕಲಾ, ಕಸಾಪ ಜಿಲ್ಲಾ ಗೌರವಾಧ್ಯಕ್ಷ ಎಸ್. ಶರಣೇಗೌಡ, ಗೌರವ ಕಾರ್ಯದರ್ಶಿ ಎಸ್. ದೇವೇಂದ್ರಗೌಡ ಭಾಗವಹಿಸಲಿದ್ದಾರೆ. ವಿ.ಸಿ. ಪಾಟೀಲ್, ಎಂ. ಭಾಸ್ಕರ್, ಪಂಪಯ್ಯಸ್ವಾಮಿ ಸಾಲಿಮಠ, ವೀರೇಶ ಗೋನವಾರ್, ಬಸಮ್ಮ ತಾಳಿಕೋಟಿ, ದಿವ್ಯಲಕ್ಷ್ಮೀ, ಉಮಾದೇವಿ ಹಿರೇಮಠ, ಸಂಗೀತಾ ಸಾರಂಗಮಠ ಚುಟುಕು ವಾಚನ ಮಾಡುವರು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕ ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ್ ಕೌದಿ ಹಾಗೂ ವೀರೇಶ ಗೋನವಾರ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

