ರಾಯಚೂರು

ಹೈ.ಕ. ಭಾಗ್ಯದ ಬಾಗಿಲು ತೆರೆದಿದೆ: ಪ್ರಶ್ನಕುಮಾರ

Published On :

ಮುದಗಲ್: ಕೇಂದ್ರ ಸರಕಾರ ಹೈ-ಕ ಜನರ ಬಹುದಿನದ ಬೇಡಿಕೆಯಾಗಿದ್ದ 371ನೇ(ಜೆ) ಕಲಂ ತಿದ್ದುಪಡಿ ಮಾಡುವ ಮೂಲಕ ಇಲ್ಲಿನ ಜನರ ಬಾಗ್ಯದ ಬಾಗೀಲು ತೆರೆಯುವಂತೆ ಮಾಡಿದೆ ಎಂದು ಮಸ್ಕಿ ಶಾಸಕರ ಪುತ್ರ, ಕಾಂಗ್ರೆಸ್ ಯುವ ಮುಖಂಡ ಪ್ರಶ್ನಕುಮಾರ ಪಾಟೀಲ್ ಹೇಳಿದರು.
ಪಟ್ಟಣ ಸಮೀಪದ ಹಡಗಲಿ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  
ಹೈ-ಕಕ್ಕೆ ವಿಶೇಷ ಸ್ಥಾನಮಾನ ಲಭಿಸಿದ್ದರಿಂದ ಅನೇಕ ಉದ್ಯೋಗ ಅವಕಾಶಗಳು ದೊರೆಯಲಿದೆ. ವಿದ್ಯಾರ್ಥಿಗಳು ಸರ್ಕಾರಿ ಸವಲತ್ತನ್ನು ಉಪಯೋಗಿಸಿಕೊಂಡು ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಅಂಕಗಳಿಸುವ ಮೂಲಕ ಉನ್ನತ ಹುದ್ದೆ ಅಲಂಕರಿಸುವಂತರಾಗಬೇಕು ಎಂದರು.
ನಾಗಲಾಪುರ ವಿಎಸ್‌ಎಸ್‌ಎನ್ ನಿರ್ದೇಶಕ ವೆಂಕನಗೌಡ ಮಾತನಾಡಿ, ಪಾಲಕರು ದಿನನಿತ್ಯ ಮಕ್ಕಳಿಗೆ ಶಾಲೆಗೆ ಕಳುಹಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಮಹಾಂತಯ್ಯ ಸ್ವಾಮಿ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಹನುಮಂತ ಪಾಪಣ್ಣ, ಸದಸ್ಯರಾದ ಹನುಮಂತ ಗೊಲ್ಲರ, ಹೆಮಣ್ಣ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.