ಮಂತ್ರಾಲಯದಲ್ಲಿ ಭಕ್ತರ ದಂಡು
ಕ.ಪ್ರ. ವಾರ್ತೆ ರಾಯಚೂರು ಜ.15
ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮಂತ್ರಾಲಯದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ನದಿಯಲ್ಲಿ ಪುಣ್ಯಸ್ನಾನ ಮಾಡಿ ಶ್ರೀರಾಯರ ದರ್ಶನ ಪಡೆದರು.
ಜಿಲ್ಲೆಯ ತುಂಗಭದ್ರಾ ಮತ್ತು ಕೃಷ್ಣಾ ನದಿ ತೀರದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯ ಜನತೆ ಪುಣ್ಯಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಿಸಿದರು. ತಾಲೂಕಿನ ದೇವಸೂಗೂರು ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ ಮಾಡಿದ ಸಾವಿರಾರು ಸಂಖ್ಯೆಯ ಜನತೆ ನಂತರ ಸೂಗೂರೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದರು.
ಕಳೆದ ಎರಡು ದಿನಗಳಿಂದ ಸರ್ಕಾರಿ ಕಚೇರಿ ಶಾಲಾ- ಕಾಲೇಜುಗಳಿಗೆ ರಜೆಯಿದ್ದುದ್ದರಿಂದ ಮಂತ್ರಾಲಯದಲ್ಲಿ ಭಕ್ತರ ದಂಡು ಹೆಚ್ಚಿತ್ತು.
ಬೆಂಗಳೂರು, ಮಂಗಳೂರು ಸೇರಿದಂತೆ ಕರ್ನಾಟಕ ಮತ್ತು ಆಂಧ್ರದಿಂದ ಸಾವಿರಾರು ಸಂಖ್ಯೆಯ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದರು. ಮಕರ ಸಂಕ್ರಾಂತಿ ಹಬ್ಬದ ಸಂದರ್ಭ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಶ್ರೀಮಠದಲ್ಲಿ ಸಾಲಾಗಿ ನಿಂತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದರು. ಹಾಗೆಯೇ ಅನೇಕರು ಮಂತ್ರಾಲಯದ ಸುತ್ತಲಿನ ಗ್ರಾಮಸ್ಥರು ಪಾದಯಾತ್ರೆಯ ಮೂಲಕ ಆಗಮಿಸಿ ಶ್ರೀರಾಯರ ದರ್ಶನ ಪಡೆದರು.
ನಗರದಲ್ಲಿಯೂ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಎಲ್ಲೆಡೆ ಕಳೆಗಟ್ಟಿತ್ತು. ಬೆಳಗ್ಗೆಯಿಂದಲೇ ನಗರದ ಪ್ರಮುಖ ದೇವಾಲಯಗಳಿಗೆ ತೆರಳಿದ ಜನತೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಜಿಲ್ಲೆಯ ಇನ್ನಿತರೆಡೆಯೂ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಗ್ಗೆ ವರದಿಗಳು ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

