ಜಿಲ್ಲಾಸ್ಪತ್ರೆ ಆವರಣ ಆರೋಗ್ಯ ಇಲಾಖೆ ಮೀಸಲಿಗೆ ಒತ್ತಾಯ
ಕ.ಪ್ರ. ವಾರ್ತೆ ರಾಯಚೂರು ಜ.16
ಜಿಲ್ಲಾಸ್ಪತ್ರೆ ಆವರಣವನ್ನು ಆರೋಗ್ಯ ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ಮೀಸಲಿರಿಸುವಂತೆ ಒತ್ತಾಯಿಸಿ ಜಿಲ್ಲಾಸ್ಪತ್ರೆ ಆವರಣ ಹಾಗೂ ಸಾಥ್ ಕಚೇರಿ ಉಳಿಸಿ ಹೋರಾಟ ಸಮಿತಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.
ಜಿಲ್ಲಾಡಳಿತ ಭವನ ಹಾಗೂ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾ ಪ್ರಯೋಗಾಲಯ, ಕ್ಷಯರೋಗ ಕೇಂದ್ರ, ಲಾಜಿಸ್ಟಿಕ್ ಕೇಂದ್ರ ಸೇರಿದಂತೆ ಇನ್ನಿತರೆ ಕಚೇರಿಗಳಿದ್ದು, ಸಾರ್ವಜನಿಕರಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲು ಅನುಕೂಲ ಕಲ್ಪಿಸಬೇಕು. ಜಿಲ್ಲಾಡಳಿತ ಭವನ ನಿರ್ಮಿಸುವುದನ್ನು ಕೈಬಿಟ್ಟು ಈ ಸ್ಥಳವನ್ನು ಆರೋಗ್ಯ ಇಲಾಖೆ ಕಾರ್ಯ ಚಟುವಟಿಕೆಗಳಿಗೆ ಮೀಸಲಿಡಬೇಕು. ಜಿಲ್ಲಾಡಳಿತ ಭವನವನ್ನು ಪ್ರಸ್ತುತ ಕಚೇರಿ ಮುಂದೆ ನಿರ್ಮಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.
ಜಿಲ್ಲಾಸ್ಪತ್ರೆಯನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ಹಸ್ತಾಂತರಿಸಲಾಗಿದ್ದು, ಎಂಸಿಎ ಹಾಕಿದ ಷರತ್ತುಗಳಲ್ಲಿ ಹೆಚ್ಚುವರಿ ಜಮೀನಿನ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾಡಳಿತ ಭವನಕ್ಕೆ ಈಗಿರುವ ಸಾಥ್ ಕಚೇರಿ ಸ್ಥಳ ಸೂಕ್ತವಾಗಿದ್ದು, ಐತಿಹಾಸಿಕ ಹಿನ್ನೆಲೆಯುಳ್ಳ ಈ ಕಚೇರಿ ಉಳಿಸುವುದು ಅತ್ಯಗತ್ಯ ಎಂದು ಸಮಿತಿ ಹೇಳಿದೆ.
ಹೋರಾಟ ಸಮಿತಿ ಮುಖಂಡರಾದ ರಾಘವೇಂದ್ರ ಕುಷ್ಟಗಿ, ರಜಾಕ್ ಉಸ್ತಾದ್, ರವೀಂದ್ರ ಜಲ್ದಾರ್, ವೀರಣ್ಣ ಮುದಗಲ್, ಡಾ. ವಿ. ಎ. ಮಾಲಿಪಾಟೀಲ್, ಡಾ.ಚಂದ್ರ ಗಿರೀಶ, ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

