ಗುಲ್ಬರ್ಗ ಬಂದ್ ಸಂಪೂರ್ಣ
ಗುಲ್ಬರ್ಗ: ಪಾತಕಿ ಜೊತೆಗಿನ ಸೆಣಸಾಟದಲ್ಲಿ ಬಂಡೆ ಮೃತಪಡಲು ಸರ್ಕಾರದ ಅಲಕ್ಷತನವೇ ಕಾರಣ. ಗುಲ್ಬರ್ಗದಲ್ಲಿ ಅನೇಕ ಪಾತಕಿಗಳು ಆಸರೆ ಪಡೆದಿದ್ದರೂ ಇಲ್ಲಿನ ಪೊಲೀಸ್ ಅವರನ್ನು ಮಟ್ಟ ಹಾಕುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕ ನೀಡಿದ್ದ ಗುಲ್ಬರ್ಗ ಬಂದ್ ಕರೆಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಿತ್ತು.
ಗುರುವಾರ ಬೆಳಗ್ಗೆಯಿಂದಲೇ ಅಂಗಡಿ- ಮುಂಗಟ್ಟುಗಳು ಮುಚ್ಚಿದ್ದವು. ಮುಖ್ಯರಸ್ತೆಯಲ್ಲಿ ಆಟೋ, ನಗರ ಸಾರಿಗೆ ಸಂಚಾರ ಇರಲಿಲ್ಲ. ಬಿಜೆಪಿ ಜಿಲ್ಲಾಧ್ಯಕ್ಷ ರಾಜಕುಮರ ತೇಲ್ಕೂರ್, ಮಾಜಿ ಸಚಿವರಾದ ರೇವುನಾಯಕ ಬೆಳಮಗಿ, ಸುನೀಲ ವಲ್ಯಾಪುರೆ, ಶಾಸಕ ದತ್ತಾತ್ರೇಯ ಪಾಟೀಲ್ ಸೇರಿದಂತೆ ಅನೇಕರು ಬಂದ್ ದಿನದ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಮುಖ್ಯರಸ್ತೆಯಲ್ಲಿ ರ್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಪೊಲೀಸಿಂಗ್ನಲ್ಲಿ ಬಿಗುವು ತನ್ನಿ, ಪಾತಕಿಗಳನ್ನು ಮಟ್ಟ ಹಾಕುವ ಬಿಗಿ ವ್ಯವಸ್ಥೆ ಜಾರಿಗೆ ತನ್ನಿ ಎಂದು ಆಗ್ರಹಿಸುವ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯ ತಾಲೂಕು ಸ್ಥಳಗಳಲ್ಲಿ ಬಿಜೆಪಿ ಕರೆದಿದ್ದ ಬಂದ್ಗೆ ಅಷ್ಟಾಗಿ ಸ್ಪಂದನೆ ದೊರಕಲಿಲ್ಲ. ಜನಜೀವನ ಎಂದಿನಂತೆ ಇತ್ತು. ಆದರೆ ತಾಲೂಕು ಬಿಜೆಪಿ ಘಟಕಗಳ ಕಾರ್ಯಕರ್ತರು ಮೆರವಣಿಗೆ ನಡೆಸಿ ಅಲ್ಲಿನ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

