ರಾಯಚೂರು

ಸಂಚಾರ ನಿಯಮ ಪಾಲಿಸಿ ಅಪಘಾತ ತಡೆಯಲು ಎಸ್‌ಐ ಕಟ್ಟಿಮನಿ ಸಲಹೆ

Published On :


ಮಸ್ಕಿ: ರಸ್ತೆ ಸಂಚಾರ ನಿಯಮಗಳನ್ನು ಎಲ್ಲರೂ ಸರಿಯಾಗಿ ಪಾಲಿಸಿದಾಗ ಮಾತ್ರ ಅಪಘಾತಗಳ ಸಂಖ್ಯೆ ಕಡಿಮೆಗೊಳಿಸಲು ಸಾಧ್ಯ ಎಂದು ಪಿಎಸ್ಸೈ ಗುರುರಾಜ್ ಕಟ್ಟೀಮನಿ ಹೇಳಿದರು. ಪಟ್ಟಣದ ಶತಮಾನೋತ್ಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಸ್ಕಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ವಿಧಾರ್ಥಿಗಳು  ರಸ್ತೆಯ ಸಂಚಾರದ ನಿಯಮಗಳನ್ನು ಸರಿಯಾಗಿ ತಿಳಿದುಕೊಳ್ಳುವು ದರೊಂದಿಗೆ ಮಾಹಿತಿ ಇರದ ಪ್ರತಿಯೊಬ್ಬರಿಗೂ ಮಾಹಿತಿ ನೀಡಿ ಅಪಘಾತ ಪ್ರಮಾಣ ಕಡಿಮೆಗೊಳಿಸಲು ನೆರವಾಗಬೇಕೆಂದರು.
ವಾಹನ ಹೊಂದಿರುವವರು ಮೊದಲು ರಸ್ತೆಯ ನಿಯಮಗಳನ್ನು ಅರಿತುಕೊಳ್ಳಬೇಕು.ಸಂಬಂಧಿಸಿದ ಸೂಕ್ತ ದಾಖಲಾತಿಗಳನ್ನು ಪಡೆದುಕೊಂಡಿರಬೇಕು. ಆಗ ಮಾತ್ರ ಸುಗಮ ಸಂಚಾರ ಸಾಧ್ಯ. ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ವಿಮೆ ಮುಂತಾದ ಪರಿಹಾರಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಸಿಪಿಐ ಎಂ.ಜಿ. ಸತ್ಯನಾರಾಯಣರಾವ್ ಮಾತನಾಡಿದರು. ಪ್ರಾಚಾರ್ಯ ಬಿ.ಎಸ್.ಕುರಿ, ಶಿಕ್ಷಕ ಬಸವರಾಜ ಮೇಟಿ ಉಪ ಸ್ಥಿತರಿದ್ದರು. ಸರ್ಕಾರಿ ಪ.ಪೂ.ಕಾಲೇಜಿನ ಹಾಗೂ ಬಾಲಕಿಯರ ಸರ್ಕಾರಿ ಫ್ರೌಢಶಾಲೆಯ ನೂರಾರು ವಿದ್ಯಾರ್ಥಿನಿಯರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.