ರಾಯಚೂರು

ಗಣರಾಜೋತ್ಸವ; ಪೂರ್ವಭಾವಿ ಸಭೆ ಯಶಸ್ವಿ

Published On :

ಲಿಂಗಸ್ಗೂರು: ಅಂಬಿಗರ ಚೌಡಯ್ಯ ಹಾಗೂ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯ ಪೂರ್ವಭಾವಿ ಸಭೆಗಳು ಇತ್ತೀಚೆಗೆ ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಚರ್ಚಿಸಿ ಜ.21ರಂದು ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನದಿಂದ ಅಂಬಿಗರ ಚೌಡಯ್ಯ ಜಯಂತಿ ಭಾವಚಿತ್ರದ ಮೆರವಣಿಗೆ ನಡೆಸುವುದು, ನಂತರ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅದೇ ರೀತಿ ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ತಾಲೂಕು ಆಡಳಿತದಿಂದ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭಾನ್ವಿತರಿಗೆ ಸನ್ಮಾನಿಸಲು ತಹಸೀಲ್ದಾರ್ ಜಿ.ಎಸ್. ಮಹಾಜನ್ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯಾಧಿಕಾರಿ ನಂದಕುಮಾರ, ಇಒ ಶರಣಬಸಪ್ಪ, ಪ್ರಾಚಾರ್ಯ ರಾಜಾಸಾಬ, ಸಿಡಿಪಿಒ ಪ್ರಭಾಕರ, ದೈಹಿಕ ಶಿಕ್ಷಣಾಧಿಕಾರಿ ಬಾಲನಗೌಡ, ಮಲ್ಲಿಕಾರ್ಜುನ, ಗುರುಪಾದಪ್ಪ, ಉಪ ತಹಸೀಲ್ದಾರ್ ಖಾಜಾಹುಸೇನ್ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.