ರಾಯಚೂರು

ಬಿಡಾಡಿ ದನಗಳ ಸಾವು: ಡಿಸಿ ಪರಿಶೀಲನೆ

Published On :

ಕ.ಪ್ರ. ವಾರ್ತೆ    ರಾಯಚೂರು    ಜ.18
ಇಲ್ಲಿಗೆ ಸಮೀಪದ ಮಲಿಯಾಬಾದ್‌ನಲ್ಲಿರುವ ಗೋಶಾಲೆಯಲ್ಲಿ 80ಕ್ಕೂ ಹೆಚ್ಚು ದನಗಳು ಸಾವಿಗೀಡಾಗಿವೆ ಎಂಬ ದೂರಿಗೆ ಸಂಬಂಧಿಸಿ ಶನಿವಾರ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಗೋಶಾಲೆಗೆ ಭೇಟಿ ನೀಡಿ ಗೋಶಾಲೆ ಟ್ರಸ್ಟ್‌ನ ನಿರ್ಲಕ್ಷ್ಯದ ಬಗ್ಗೆ ನೋಟಿಸ್ ಜಾರಿಗೆ ಸೂಚಿಸಿದರು.
ಗೋಶಾಲೆಗೆ ಭೇಟಿ ನೀಡಿದ ಅವರು, ಗೋಶಾಲೆಯಲ್ಲಿನ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೇ ಮೃತ ಜಾನುವಾರುಗಳ ಕಳೇಬರಗಳನ್ನು ಅಲ್ಲಿಂದ ತೆರವುಗೊಳಿಸಲು ಕಟ್ಟುನಿಟ್ಟಿನ ಆದೇಶ ನೀಡಿದರು. ನಗರದಲ್ಲಿ ಸುತ್ತಾಡುತ್ತಿದ್ದ ಬಿಡಾಡಿ ದನಗಳನ್ನು ರಕ್ಷಿಸುವಂತೆ ಗೋಶಾಲೆಗೆ ತಂದು ಬಿಡಲಾಗಿತ್ತು. ಆದರೆ ಅವುಗಳ ಪಾಲನೆಯಲ್ಲಿ ನಿರ್ಲಕ್ಷ್ಯ ತೋರುವ ಮೂಲಕ ಗೋಶಾಲೆ ಟ್ರಸ್ಟ್ ಸಾವಿಗೆ ಕಾರಣವಾಗಿದೆ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.
ಗೋಶಾಲೆಯಲ್ಲಿನ ಜಾನುವಾರುಗಳ ಸಾವಿನ ಹಿನ್ನೆಲೆಯಲ್ಲಿ ಟ್ರಸ್ಟ್‌ಗೆ ನೊಟೀಸ್ ಜಾರಿ ಮಾಡಲಾಗುತ್ತದೆ. ಉತ್ತರ ಬಂದ ನಂತರ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಗೋಶಾಲೆಯಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಮತ್ತಷ್ಟು ಸಾವುಗಳು ಸಂಭವಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಈ ವೇಳೆ 'ಕನ್ನಡಪ್ರಭ'ಕ್ಕೆ ತಿಳಿಸಿದರು.
ಜಾನುವಾರುಗಳ ಸಾವಿನ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ಕೂಡಲೇ ಸ್ವಚ್ಛತಾ ಕ್ರಮ ಕೈಗೊಳ್ಳಲು ಟ್ರಸ್ಟ್‌ನವರಿಗೆ ಆದೇಶಿಸಿದರು.
ನಗರಸಭೆಯ ಸದಸ್ಯ ಆಂಜನೇಯ ಯಕ್ಲಾಸಪುರ, ತಹಸೀಲ್ದಾರ್ ಅಶೋಕ ಜಹಾಗೀರದಾರ್, ನಗರಸಭೆ ಪರಿಸರ ಎಂಜಿನಿಯರ್ ಮಲ್ಲಿಕಾರ್ಜುನ್ ಸೇರಿ ಅನೇಕರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.