ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು
ರಾಯಚೂರು: ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಜೆಸ್ಕಾಂ ಸಿಬ್ಬಂದಿಯೊಬ್ಬ ಸಾವಿಗೀಡಾಗಿದ್ದಾರೆ. ಮೃತನನ್ನು ಮೈಲಾರಪ್ಪ ಎಂದು ಗುರುತಿಸಲಾಗಿದೆ. ಈತ ಜೆಸ್ಕಾಂನಲ್ಲಿ ಸಹಾಯಕ ಲೈನ್ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕದಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಹರಿದು ಆತ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಜಾಲಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಡಿಕ್ಕಿ: ಬೈಕ್ ಸವಾರರ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಮಣ್ಣಿಕೇರಿ ಕ್ಯಾಂಪಿನ ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾಗಿದ್ದಾರೆ. ಮೃತರನ್ನು ಬೈಕ್ ಸವಾರರಾದ ವೆಂಕಟೇಶ್ ಮತ್ತು ಮೌನೇಶ ಎಂದು ಗುರುತಿಸಲಾಗಿದೆ. ಲಾರಿಯು ದುರಸ್ತಿಗೀಡಾಗಿ ರಸ್ತೆಯಲ್ಲಿ ನಿಂತಿದ್ದ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದ್ದರಿಂದ ಬೈಕ್ನಲ್ಲಿದ್ದ ಈ ಇಬ್ಬರೂ ಸಾವನ್ನಪ್ಪಿದರೆಂದು ಪೊಲೀಸರು ತಿಳಿಸಿದ್ದಾರೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಜಿಲ್ಲಾ ಸಮ್ಮೇಳನ; ಸಮಿತಿ ರಚನೆ
ಲಿಂಗಸ್ಗೂರು: ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಜ.9ರಿಂದ ಎರಡು ದಿನಗಳ ಕಾಲ ನಡೆದ ಜಿಲ್ಲಾ ಸಮ್ಮೇಳನ ಮಾನವಿ ತಾಲೂಕಿನ ಸಿರವಾರ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತು. ಎಸ್ಎಫ್ಐ ರಾಜ್ಯಾಧ್ಯಕ್ಷ ಅನಂತ ನಾಯಕ ಸಮ್ಮೇಳನ ಉದ್ಘಾಟಿಸಿದರು. ನಂತರ ಎಸ್ಎಫ್ಐ ನೂತನ ಜಿಲ್ಲಾ ಸಮಿತಿ ಪದಾಧಿಕಾರಿಗಳನ್ನು ನೇಮಿಸಲಾಯಿತು. ಜಿಲ್ಲಾ ಸಮಿತಿ ನೂತನ ಅಧ್ಯಕ್ಷರಾಗಿ ಎಚ್. ಶಬ್ಬೀರ, ಕಾರ್ಯದರ್ಶಿ ಮೇಷಾಕ್, ಉಪಾಧ್ಯಕ್ಷರಾಗಿ ರಮೇಶ ವೀರಾಪುರ, ಮೌನೇಶ, ರಮೇಶ ರಾಮತ್ನಾಳ, ಸಹ ಕಾರ್ಯದರ್ಶಿಗಳಾಗಿ ಮುಸ್ತಫಾ, ನಾಗರಾಜ, ಮಹೇಶ, ವೀರಭದ್ರ, ಸದಸ್ಯರಾಗಿ ಹನುಮಂತ, ನಾಗರಾಜ, ಅರುಣ, ವಲಿ, ಸಣ್ಣಯ್ಯ ಅವರನ್ನು ನೇಮಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

