ಕಡ್ಡಾಯ ಮತದಾನಕ್ಕೆ ಡಿಸಿ ಸಲಹೆ
ಕ.ಪ್ರ. ವಾರ್ತೆ ರಾಯಚೂರು ಜ.18
ಮತದಾನ ಮಾಡುವುದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗೆ ನೀಡಿರುವ ಹಕ್ಕು ಆಸೆ ಆಮಿಷಗಳಿಗೆ ಬಲಿಯಾಗದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸುವ ಉದ್ದೇಶದಿಂದ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು.
ನಗರದಲ್ಲಿ ಈಚೆಗೆ ಆಯೋಜಿಸಿದ್ದ ಜ.25ರ ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
ಬಹುಮಾನ ನೀಡಲು ಸೂಚನೆ: ಮತದಾರರ ದಿನಾಚರಣೆಯ ಅಂಗವಾಗಿ ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದಲ್ಲಿ ಭಾಷಣ, ಪ್ರಬಂಧ ಸ್ಪರ್ಧೆ, ಹಾಡುಗಳ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲು ಡಿಡಿಪಿಐಗೆ ಈ ವೇಳೆ ಅವರು ಸೂಚನೆ ನೀಡಿದರು. ಮಕ್ಕಳ ಪ್ರಭಾತ ಫೇರಿ ಆಯೋಜಿಸುವುದು, ಮತದಾನ ಕುರಿತು ತಿಳಿವಳಿಕೆ ಮೂಡಿಸುವ ಬ್ಯಾನರ, ಪೋಸ್ಟರ್‌ಗಳನ್ನು ಹಿಡಿದ ಮಕ್ಕಳು ಪ್ರಭಾತ ಫೇರಿಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಆದೇಶಿಸಿದರು.
200 ಅನುದಾನ ಲಭ್ಯ: ಎಲ್ಲ ತಹಸೀಲ್ದಾರ್ ಈ ಬಗ್ಗೆ ಹೆಚ್ಚಿನ ಪ್ರಚಾರಕ್ಕೆ ಕ್ರಮ ಕೈಗೊಳ್ಳಬೇಕು. ನಗರ ಪ್ರದೇಶದಲ್ಲಿ ಎಲ್ಲರೂ ಸೇರಿ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪ್ರತಿ ಬೂತ್ ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜಿಸಲು 200 ಅನುದಾನ ಲಭ್ಯವಿದ್ದು, ಕಾರ್ಯಕ್ರಮ ಆಯೋಜಿಸಲು ಸೂಚಿಸಿದರು.
ಗ್ರಾಪಂ ಮಟ್ಟದಲ್ಲಿ ಬೂತ್‌ಗೆ ಪ್ರತ್ಯೇಕ ಅನುದಾನ ನೀಡಲಾಗುವುದು. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಕಾರ್ಯಕ್ರಮವನ್ನು ಆಯೋಜಿಸುವಂತೆ ಸೂಚಿಸಿದ ಅವರು, ಜ.25 ರಂದು ಶಾಲಾ ಮಕ್ಕಳ ಜಾತಾವನ್ನು ನಗರದ ವಿವಿಧ ಭಾಗಗಳಿಂದ ಆಯೋಜಿಸಿ ರಂಗಮಂದಿರಕ್ಕೆ ಕರೆ ತರಲು ಆದೇಶಿಸಿ, ಮತದಾನದ ದಿನಾಚರಣೆಯಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳು ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ಅಧಿಕಾರಿ ಮಲ್ಲಣ್ಣ, ತಹಸೀಲ್ದಾರ್ ಅಶೋಕ ಜಾಗೀರದಾರ್, ಶಹಾನೂರ, ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೆಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಸೇರಿ ಅನೇಕ ಅಧಿಕಾರಿಗಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

