ರಾಯಚೂರು

ನಾಳೆ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Published On :

ಕ.ಪ್ರ. ವಾರ್ತೆ   ರಾಯಚೂರು   ಜ.19
ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮವನ್ನು ಜ.21ರಂದು ಆಯೋಜಿಸಿದ್ದು ಜಿಲ್ಲೆಯ ಎಲ್ಲ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದವರು ಪಾಲ್ಗೊಳ್ಳುವಂತೆ ಸಂಘ ಮನವಿ ಮಾಡಿದೆ.
ಈ ಕುರಿತು ನಗರದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ರಂಗನಾಥ ದೇಸಾಯಿ ಮಾತನಾಡಿ, ಅಂದು ನಗರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ ರಂಗಮಂದಿರದಲ್ಲಿನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಗಂಗಾಮತ ನೌಕರರು ಮುಂದಿನ ದಿನಗಳಲ್ಲಿ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಲು ಉದ್ದೇಶಿಸಿದ್ದು, ನೌಕರರು ಸದಸ್ಯತ್ವ ಪಡೆದುಕೊಳ್ಳಬೇಕು. ಸಮಾಜದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವಂತಾಗಲು ಐಎಎಸ್, ಐಪಿಎಸ್, ಕೆಎಎಸ್ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ತರಬೇತಿಗಳನ್ನೂ ಆಯೋಜಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಯಾನಾಗುಂದಿಯಲ್ಲಿ ಫೆ.9ರಂದು ಆಯೋಜಿಸಿರುವ ಗಂಗಾಮತ ಸಮಾಜದ ರಾಜ್ಯ ಮಟ್ಟದ ಬೃಹತ್ ಸಮಾವೇಶದಲ್ಲಿ ಎಲ್ಲ ನೌಕರರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಜ.21ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಕೇವಲ ಜಿಲ್ಲಾ ಕೇಂದ್ರದಲ್ಲಷ್ಟೇ ಅಲ್ಲದೇ ಎಲ್ಲ ತಾಲೂಕುಗಳಲ್ಲಿಯೂ ಅಂದು ಬೆಳಗ್ಗೆ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಧಿಕಾರಿಗಳು ಸೂಚಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಸಂಘದ ಪ್ರಮುಖರಾದ ಎ.ಕೆ. ಪ್ರಭು, ವಿದ್ಯಾಸಾಗರ ಚಿಣಮಗೇರಿ, ಯಂಕಣ್ಣ, ವಿಜಯಕುಮಾರ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.