ರಾಯಚೂರು

ಶೇಂಗಾ, ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ; ದೂರು

Published On :

ಮುದಗಲ್: ದೇಶಕ್ಕೆ ಆಹಾರ ಭದ್ರತೆಯನ್ನು ಒದಗಿಸಿಕೊಟ್ಟಂಥ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದಲ್ಲದೆ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯದೆ ಇರುವುದರಿಂದ ರಾಜ್ಯ ರೈತ ಸಂಘದಿಂದ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದು ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಎಚ್ಚರಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಿ ಖರೀದಿ ಕೆಂದ್ರಗಳನ್ನು ತೆರೆಯದೆ ರೈತರನ್ನು ಸರ್ಕಾರಿ ಸ್ವಾಮ್ಯದ ಕೆಒಎಫ್ ಸಂಸ್ಥೆ ವಂಚಿಸುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತವೂ ಮೌನವಹಿಸಿದೆ ಎಂದು ದೂರಿದರು. ಮಂತ್ರಿಗಳು, ಅಧಿಕಾರಿಗಳು ವ್ಯಾಪಾರಸ್ಥರ ಪರವಾಗಿ ನಿಂತಿದ್ದು, ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೋರಾಟ ಮಾಡುತ್ತಿದ್ದರೂ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಶೇಂಗಾ 2500ರಿಂದ 2800, ಸೂರ್ಯಕಾಂತಿ 2500ರಿಂದ 3400, ಕಡಲೇ 2500ರಿಂದ 2800 ಬೆಲೆಗೆ ಮಾರಾಟವಾಗುತ್ತಿದ್ದು ಸರ್ಕಾರ ಗಂಭೀರ ಚಿಂತನೆ ಮಾಡುತ್ತಿಲ್ಲ, ಗುಲ್ಬರ್ಗ ಜಿಲ್ಲೆಯಲ್ಲಿ ಮಾತ್ರ ತೊಗರಿ ಖರೀದಿ ಕೇಂದ್ರವನ್ನು ತೆರೆದಿದ್ದು, ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರವನ್ನು ಇನ್ನೂ ತೆರೆದಿಲ್ಲ ಎಂದರು. ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸೂರ್ಯಕಾಂತಿ 3700, ಶೇಂಗಾ 4000ಗಳಿಗೆ ಖರೀದಿ ಮಾಡಲಾಗುತ್ತಿದೆ. ಜಿಲ್ಲೆಯ ರೈತರಿಗೆ ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದರು. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.