ಸಮಾಜದ ಅಂಕು-ಡೊಂಕು ತಿದ್ದಲು ವಚನಗಳು ಸಹಕಾರಿ: ಶರಣಪ್ಪ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು ಜ.21
ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದಿ ಸರಿದಾರಿಗೆ ತರುವಲ್ಲಿ ಶರಣರ ವಚನಗಳು ಸಹಕಾರಿಯಾಗಿವೆ ಎಂದು ವಿಸಿಬಿ ಕಾಲೇಜು ಆಡಳಿತಾಧಿಕಾರಿ ಸಿ. ಶರಣಪ್ಪ ಹೇಳಿದರು.
ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಅಂತಹ ಶರಣರ ಪೈಕಿ ಅಂಬಿಗರ ಚೌಡಯ್ಯ ಕೂಡ ಒಬ್ಬರಾಗಿದ್ದು, ಸಮಾಜ ಅಂಕು-ಡೊಂಕು ತಿದ್ದಲು ಅಂಬಿಗರ ಚೌಡಯ್ಯ ಅವರ ವಚನಗಳು ಉಗ್ರ ಹಾಗೂ ಗಟ್ಟಿತನದಿಂದ ಹೇಳಿದ್ದಾರೆ. ಇವರು ಬರೆದ ವಚನಗಳಲ್ಲಿ 105 ವಚನಗಳು ಸಿಕ್ಕಿವೆ. ಇಂತಹ ಮಹಾನ್ ಶರಣರ ಆದರ್ಶ, ಮಾರ್ಗದರ್ಶನ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಬಾಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಬಸಮ್ಮ ಪರಮೇಶ ಯಾದವ್, ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಎಪಿಎಂಸಿ ಅಧ್ಯಕ್ಷ ಚನ್ನವೀರಪ್ಪಗೌಡ ಪಾಗದ್, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಅಯ್ಯಪ್ಪ ಬನ್ನಿಗೋಳ, ತಹಶೀಲ್ದಾರ ಜಿ.ಎಸ್. ಮಹಾಜನ್, ಉಪ ತಹಸೀಲ್ದಾರ್ ಖಾಜಾಹುಸೇನ್, ಗಂಗಾಮತ ಸಮಾಜದ ಅಧ್ಯಕ್ಷ ಅಮರೇಶ ಪೂಜಾರ್ ಸೇರಿದಂತೆ ಉಪಸ್ಥಿತರಿದ್ದರು. ಅಮರೇಶಸ್ವಾಮಿ ಯರಡೋಣ ನಿಜಶರಣ ಅಂಬಿಗರ ಚೌಡಯ್ಯ ಕುರಿತ ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

