ಸುದ್ದಿ ಸಂಕ್ಷೇಪ
ಅಪಘಾತ ತಡೆಗೆ ಸೂಕ್ತ ಕ್ರಮ; ಆರ್ಟಿಒ
ರಾಯಚೂರು: ರಸ್ತೆಯಲ್ಲಿ ಸಾಗುವ ವೇಳೆ ದುರಸ್ತಿಗೀಡಾಗುವ ವಾಹನಗಳನ್ನು ನಿಯಮಾನುಸಾರ ನಿಲುಗಡೆ ಮಾಡದಿರುವುದರಿಂದ ಅಪಘಾತಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರುವ ಚಾಲಕರು ಮತ್ತು ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರ್ಟಿಒ ಸಿದ್ದಲಿಂಗಯ್ಯ ತಿಳಿಸಿದ್ದಾರೆ. ಅವರು ಈ ಕುರಿತು ಪ್ರಕಟಣೆ ನೀಡಿ, ಮಾರ್ಗ ಮಧ್ಯೆ ವಾಹನಗಳು ಕೆಟ್ಟು ನಿಂತಲ್ಲಿ ಅಂಥ ವಾಹನಗಳನ್ನು ರಸ್ತೆಯಲ್ಲಿಯೇ ನಿಲುಗಡೆ ಮಾಡಲಾಗುತ್ತಿದೆ. ಯಾವುದೇ ಮುನ್ಸೂಚನೆ ಚಿಹ್ನೆ ಅಳವಡಿಸದೆ ವಾಹನಗಳನ್ನು ರಸ್ತೆಯಲ್ಲಿಯೇ ನಿಲುಗಡೆ ಮಾಡುವುದರಿಂದಲೇ ಅಪಘಾತಕ್ಕೆ ದಾರಿಯಾಗುತ್ತಿದೆ ಎಂದು ತಿಳಿಸಿದ್ದಾರೆ. ಪೊಲೀಸ್, ಲೋಕೋಪಯೋಗಿ, ಸಾರಿಗೆ, ಕಂದಾಯ ಇಲಾಖೆ ಮತ್ತು ಮುನ್ಸಿಪಾಲಿಟಿ ಅಧಿಕಾರಿಗಳ ಗಮನಕ್ಕೆ ಇಂಥ ಸಮಸ್ಯೆಗಳ ಬಗ್ಗೆ ತಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿರುವ ಅವರು, ಮೋಟಾರ್ ವಾಹನ ಕಾಯ್ದೆಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.
ಹಳೆ ವಿದ್ಯಾರ್ಥಿಗಳ ಸಂಘಕ್ಕೆ ಆಯ್ಕೆ
ದೇವದುರ್ಗ: ಪಟ್ಟಣದ ಬಸವೇಶ್ವರ ವಿದ್ಯಾ ಸಂಸ್ಥೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ರವಿಕುಮಾರ ಪಾಟೀಲ್ ಅಳ್ಳುಂಡಿ ನೇಮಕಗೊಂಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಗೌರವ- ಸಲಹೆಗಾರ ಶರಣಪ್ಪ ತುಮಕೂರು, ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯಲ್ಲಿ ರವಿಕುಮಾರ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಾಧ್ಯಕ್ಷರಾಗಿ ಪ್ರಶಾಂತ ಯಾದಗಿರಿ, ಉಪಾಧ್ಯಕ್ಷರಾಗಿ ಪ್ರಕಾಶ ಎಂ, ಕೆಂಚಪ್ಪ ಚಿಕ್ಕಹೊನ್ನಕುಣಿ, ಪ್ರಧಾನ ಕಾರ್ಯದರ್ಶಿಯಾಗಿ ರಂಗಣ್ಣ ಪಾಟೀಲ್ ಕಮತಗಿ, ಕೋಶಾಧ್ಯಕ್ಷರಾಗಿ ಮಂಜುನಾಥ ಬಳೆ, ಸಹ ಕಾರ್ಯದರ್ಶಿಯಾಗಿ ಸಿದ್ದರಾಮೇಶ್ವರ, ಸಂಘಟನಾ ಕಾರ್ಯದರ್ಶಿಗಳಾಗಿ ಶೇಖರಯ್ಯಸ್ವಾಮಿ, ಮಹ್ಮದ ರಫಿ ಗೌರಂಪೇಟೆ, ಸಾಂಸ್ಕೃತಿಕ ಕಾರ್ಯದರ್ಶಿಯರಾಗಿ ಶಾಂತಮೂರ್ತಿ, ಎಂ.ಡಿ. ಇಮ್ತಿಯಾಜ್, ಗೌರವ-ಸಲಹೆಗಾರರಾಗಿ ರಾಘವೇಂದ್ರ ಎಚ್. ಹಾಗೂ ಇತರೆ 17ಜನರನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

