ಎಡದಂಡೆ ಕಾಲುವೆ ನೀರು ಅಕ್ರಮ ಬಳಕೆ
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಕಡೆಯ ಭಾಗದಲ್ಲಿನ ರೈತರ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಮಾನವಿ ಹಾಗೂ ರಾಯಚೂರು ತಾಲೂಕಿನ ಕಾಲುವೆ ಮೇಲ್ಭಾಗದ ರೈತರು ನೀರಿನ ಅಕ್ರಮ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಶೀಘ್ರದಲ್ಲಿಯೇ ಜಾಗೃತಿ ಕಾರ್ಯಕ್ರಮ ಚಳವಳಿ ರೂಪ ತಳೆಯಲಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಲುವೆಯ ಮೇಲ್ಭಾಗದಲ್ಲಿ ರೈತರು ಅಕ್ರಮವಾಗಿ ಕಾಲುವೆಗಳಿಗೆ ಪೈಪ್ ಅಳವಡಿಸಿಕೊಂಡು ಭಾರೀ ಪ್ರಮಾಣದಲ್ಲಿ ಅಕ್ರಮ ನೀರಾವರಿ ಮಾಡಿಕೊಳ್ಳುವುದರ ಜತೆಜತೆಗೆ ನೀರು ಪೋಲು ಮಾಡುತ್ತಿದ್ದಾರೆ. ಹಾಗೆಯೇ ನೀರಾವರಿ ಇಲಾಖೆಯ ಅಧಿಕಾರಿಗಳು ಸಹ ನೀರಿನ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿದರು.
ಸರ್ಕಾರಕ್ಕೆ ವಾಸ್ತವಾಂಶದ ವರದಿ ಸಲ್ಲಿಸಿ: ಪ್ರಸಕ್ತ ಹಂಗಾಮಿಗೆ ಕಾಲುವೆಯ ಕಡೆಯ ಭಾಗದ ಮಾನವಿ ಹಾಗೂ ರಾಯಚೂರು ತಾಲೂಕಿನ ರೈತರಿಗೆ ನೀರಿಲ್ಲದಂತಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಗಮನ ಸೆಳೆಯುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕಿದೆ. ಶೀಘ್ರವೇ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸರ್ಕಾರಕ್ಕೆ ವಾಸ್ತವಾಂಶದ ವರದಿ ಸಲ್ಲಿಸಲು ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.
ತುಂಗಭದ್ರಾ ಎಡದಂಡೆ ಕಾಲುವೆಯ 54ನೇ ವಿತರಣೆ ಕಾಲುವೆಯ ಬಳಿ ಎಡದಂಡೆಗೆ ನೇರವಾಗಿ ಪೈಪ್ ಅಳವಡಿಸಿ ಅಕ್ರಮವಾಗಿ ನಿರ್ಮಿಸಿರುವ ಕೆರೆಗೆ ನೀರು ತುಂಬಿಕೊಳ್ಳುವ ಹಾಗೂ ಅಕ್ರಮವಾಗಿ ಕೃಷಿ ಜಮೀನು ಮಾಡಿಕೊಂಡಿರುವ ತಿಮ್ಮನಗೌಡ ಎಂಬ ಪ್ರಗತಿಪರ ರೈತರು ನೀರು ಪೋಲು ಮಾಡುವ ಕಾರ್ಯ ಮಾಡುತ್ತಿದ್ದಾರೆ.
ಅವರಂತೆಯೇ ಅನೇಕ ರೈತರು ಕಾಲುವೆಯ ಮೇಲ್ಭಾಗದಲ್ಲಿ ಅಕ್ರಮದಲ್ಲಿ ತೊಡಗಿ ನೀರು ಕೆಳಭಾಗದವರಿಗೆ ಬಾರದಂತೆ ಮಾಡಿದ್ದಾರೆ. ಅಂಥವರ ವಿರುದ್ಧ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

