ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ
ಕ.ಪ್ರ. ವಾರ್ತೆ ಲಿಂಗಸ್ಗೂರು ಜ.23
ಕನ್ಯಾಕೋಳೂರು ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಸಂಘರ್ಷದಲ್ಲಿ ದಲಿತ ಮುಖಂಡ ದೇವೇಂದ್ರಪ್ಪ ದಳಪತಿ ಕೊಲೆ ಹಾಗೂ 12 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ ದಲಿತರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್. ಮೂರ್ತಿ ಸ್ಥಾಪಿತ) ಮುಖಂಡರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದಲ್ಲಿ ಜ. 17ರಂದು ಚೌಡೇಶ್ವರಿ ಜಾತ್ರೆ ನಿಮಿತ್ತ ಬ್ಯಾನರ್ ಹಾಕುವ ವಿಷಯಕ್ಕೆ ಸಂಬಂಧಿಸಿ ದಲಿತರು ಮತ್ತು ಸವರ್ಣೀಯರ ನಡುವೆ ಸಂಘರ್ಷಕ್ಕೆ ಕಾರಣವಾಗಿ ಗ್ರಾಮದ ದಲಿತ ಮುಖಂಡ ದೇವೇಂದ್ರಪ್ಪ ದಳಪತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಇತರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದು ನಾಲ್ಕೈದು ದಿನ ಕಳೆದರೂ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದರು.
ಪರಿಹಾರಕ್ಕೆ ಆಗ್ರಹ: ಕೊಲೆಯಾದ ದೇವೇಂದ್ರಪ್ಪ ಕುಟುಂಬಕ್ಕೆ ರು. 25 ಲಕ್ಷ ಪರಿಹಾರ ನೀಡಬೇಕು ಹಾಗೂ ದಲಿತರಿಗೆ ಸೂಕ್ತ ಭದ್ರತೆ, ಮೂಲ ಸೌಕರ್ಯ, ಉದ್ಯೋಗ ಮತ್ತು 10 ಎಕರೆ ಜಮೀನು ಒದಗಿಸಬೇಕು. ಪ್ರಮುಖ ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಮತ್ತು ರು. 5 ಲಕ್ಷ ಪರಿಹಾರ ಹಾಗೂ 5 ಎಕರೆ ಜಮೀನು ನೀಡಬೇಕು. ದೇವೇಂದ್ರಪ್ಪ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಪ್ರತಿ ತಿಂಗಳು ದಲಿತ ಕೇರಿಗಳಿಗೆ ಪೊಲೀಸ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆ ನಡೆಸಿ, ಜಾತಿ ನಿರ್ಮೂಲನೆ ಮಾಡಬೇಕು. ಇಲ್ಲದಿದ್ದಲೆ ರಾಜ್ಯಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ದಸಂಸ ಮುಖಂಡರಾದ ಪ್ರಭುಲಿಂಗ ಮೇಗಳಮನಿ, ಹುಲಗಪ್ಪ ಕುಣಿಕೆಲ್ಲೂರ, ದುರಗಪ್ಪ ಡಬ್ಬೇರಮಡು, ಅಂಬಣ್ಣ ಬೆನಕನಾಳ, ಹುಲಿಗೇಶ ನಿಲೋಗಲ್, ಹನುಮಂತ ಶೀಲಹಳ್ಳಿ, ನಾಗರಾಜ ನೀರಲಕೇರಿ, ಅಮರೇಶ ಗುಡಿಹಾಳ, ಶಿವರಾಯಪ್ಪ ಉಪ್ಪೇರಿ, ಯಮನಪ್ಪ ಈಚನಾಳ, ಹುಲಗಪ್ಪ ಜೂಲಗುಡ್ಡ, ಬಾಳಪ್ಪ ಗೊರೇಬಾಳ, ಉಮೇಶ ಹುನುಕುಂಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

