ಮಾಜಿ ಸಂಸದ ವಿರೂಪಾಕ್ಷಪ್ಪ ಬಿಜೆಪಿಗೆ
ಸಿಂಧನೂರು: ಕೊಪ್ಪಳ ಕ್ಷೇತ್ರದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಶನಿವಾರ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಕೇಂದ್ರ ಮಾಜಿ ಸಚಿವ ಬಸವರಾಜ ಪಾಟೀಲ್ ಯತ್ನಾಳ ಸಮಕ್ಷಮದಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾದರು.
ಹುಬ್ಬಳ್ಳಿಯ ಖಾಸಗಿ ವಸತಿಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅವರಿಗೆ ಲೋಕಸಭಾ ಟಿಕೇಟ್ ನೀಡದ್ದರಿಂದ ಮುನಿಸಿಕೊಂಡಿದ್ದ ಅವರು ವಿಧಾನಸಭಾ ಚುನಾವಣೆಗೂ ಮುನ್ನಾ ಬಿಎಸ್ಸಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ವಿಧಾನಸಭೆ ಚುನಾವಣೆ ನಂತರ ಬಿಎಸ್ಸಾರ್ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಪುನಃ ಕಾಂಗ್ರೆಸ್ ಸೇರಲು ಪ್ರಯತ್ನಿಸಿದ್ದರು. ಆದರೆ ಪಕ್ಷದಲ್ಲಿ ಟಿಕೆಟ್ ಬಗ್ಗೆ ಖಚಿತವಾಗಿ ಭರವಸೆ ಸಿಗದಿದ್ದರಿಂದ ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಯಾದರು.
ಇವರೊಂದಿಗೆ ಕೆಜೆಪಿ ಜಿಲ್ಲಾಧ್ಯಕ್ಷರಾಗಿದ್ದ ವೆಂಕನಗೌಡ ಮಲ್ಕಾಪೂರ, ಜೆಡಿಎಸ್ ತಾಲೂಕಾ ಪ್ರಧಾನ ಕಾರ್ಯದರ್ಶಿ ಸಾಯಿರಾಮಕೃಷ್ಣ, ಮಸ್ಕಿ ಕೆಜೆಪಿ ಪರಾಜಿತ ಅಭ್ಯರ್ಥಿ ಮಹಾದೇವಪ್ಪಗೌಡ ಸಹ ಸೇರ್ಪಡೆಗೊಂಡರು. ಬಿಜೆಪಿ ತಾಲೂಕಾಧ್ಯಕ್ಷ ದೇವೇಂದ್ರಪ್ಪ ಯಾಪಲಪರ್ವಿ, ಮುಖಂಡರಾದ ಕೊಲ್ಲಾ ಶೇಷಗಿರಿರಾವ್, ಎನ್.ಶಿವನಗೌಡ ಗೊರೇಬಾಳ, ಬಸವರಾಜ ದಡೇಸೂಗೂರು ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

