ಡಬ್ಬಿಂಗ್ನಿಂದ ಮರಾಠಿ ಚಿತ್ರರಂಗ ಹಾಳಾಗಿದೆ
ದೇವದುರ್ಗ: ಕನ್ನಡ ಚಿತ್ರರಂಗಕ್ಕೆ ಡಬ್ಬಿಂಗ್ ಪ್ರವೇಶ ತಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಕನ್ನಡ ಚಲನಚಿತ್ರ ರಂಗದಲ್ಲಿ ಕಲಾತ್ಮಕ ಚಿತ್ರಗಳ ಸಂಖ್ಯೆ ಕುಸಿಯುತ್ತಿದ್ದು, ಇಂಥ ಪರಿಸ್ಥಿತಿಯಲ್ಲಿ ಡಬ್ಬಿಂಗ್ ಚಿತ್ರಗಳ ಹಾವಳಿಯಿಂದ ಚಿತ್ರರಂಗ ಮತ್ತಷ್ಟು ಹಾಳಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಡಬ್ಬಿಂಗ್ ಪದ್ಧತಿಯಿಂದ ಈಗಾಗಲೇ ಹಿಂದಿ ಚಿತ್ರಗಳು ಮರಾಠಿ ಚಲನಚಿತ್ರಗಳನ್ನು ನುಂಗಿ ಹಾಕಿದ್ದು, ಡಬ್ಬಿಂಗ್ ಪದ್ಧತಿಯಿಂದ ಸಾಂಸ್ಕೃತಿಕ ಜಗತ್ತು ಕಲುಷಿತಗೊಳ್ಳುತ್ತದೆ. ಚಿತ್ರರಂಗ ಮತ್ತು ಕಿರುತೆಯನ್ನು ನಂಬಿಕೊಂಡಿರುವ ಕಾರ್ಮಿಕ ಕುಟುಂಬಗಳು, ಕಲಾವಿದರು ಮತ್ತು ತಂತ್ರಜ್ಞರು ನಿರುದ್ಯೋಗಿಗಳಾಗುತ್ತಾರೆಂದು ಆರೋಪಿಸಿದರು.
ಕನ್ನಡ ಚಲನಚಿತ್ರ ರಂಗದಲ್ಲಿ ಡಬ್ಬಿಂಗ್ ಪ್ರವೇಶಕ್ಕೆ ಸರ್ಕಾರ ಅವಕಾಶ ನಿರಾಕರಿಸುವಂತೆ ತಾಲೂಕು ಸಮಿತಿ ಅಧ್ಯಕ್ಷ ಡಿ. ಶ್ರೀನಿವಾಸ ವಕೀಲರು, ರಹೀಂ ಪಾಷಾ ಉದ್ದಾರ, ಬಸನಗೌಡ ಯಾಟಗಲ್, ಶರಣಗೌಡ ಗೌರಂಪೇಟ, ಎ. ರವಿಕುಮಾರ ಪಾಟೀಲ್, ಹನಮೇಶ ನಾಯಕ, ವೆಂಕಟೇಶ ನಾಯಕ ಸೋಮಕಾರ, ಮೌಲಾಲಿ ಲಾಲಕೋಟ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

