ರಾಯಚೂರು

ಎಸ್‌ಎಫ್‌ಸಿ; ಮಾಹಿತಿಗೆ ಫೆಬ್ರವರಿ ಗಡವು

Published On :

ಸಿಂಧನೂರು: ತಾಲೂಕಿನ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಶಾಸಕ ಹಂಪನಗೌಡ ಬಾದರ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.
ಮೊದಲಿಗೆ ನಗರಸಭೆಯಲ್ಲಿ ಎಸ್‌ಎಫ್‌ಸಿ ಯೋಜನೆಯ ಕಾಮಗಾರಿಯ ಬಗ್ಗೆ ಎಂಜಿನಿಯರೊಂದಿಗೆ ಚರ್ಚಿಸಿ ಫೆಬ್ರವರಿಯೊಳಗೆ ಎಸ್‌ಎಫ್‌ಸಿ ಯೋಜನೆಯ ಅಭಿವೃದ್ಧಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ತಾಲೂಕಿನ ತುರ್ವಿಹಾಳ ಕೆರೆ ತುಂಬಿಸಬೇಕು. ಮುಂಬರುವ ಬೇಸಿಗೆ ದಿನಗಳಲ್ಲಿ ಸಮರ್ಪಕವಾಗಿ ಜನರಿಗೆ ಕುಡಿಯುವ ನೀರನ್ನು ಒದಗಿಸಬೇಕು. ಇದಕ್ಕೆ ಸಂಬಧಪಟ್ಟ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸಬೇಕು. ನಗರ ಮತ್ತು ತಾಲೂಕಿನ ಎಲ್ಲಾ ಕೆರೆಗಳಲ್ಲಿ ನೀರು ಸಂಗ್ರಹಣ ಮಾಡಿಕೊಳ್ಳಬೇಕು. ನಗರೋತ್ಥಾನ ಯೋಜನೆಯ ಬಗ್ಗೆ ಬೇಗನೆ ಮಾಹಿತಿ ಒದಗಿಸಬೇಕು. ಯಾವುದೇ ಯೋಜನೆಗಳು ದುರುಪಯೋಗವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಸಮಗ್ರ ಮಾಹಿತಿ: ಲೋಕಪಯೋಗಿ ಇಲಾಖೆಯ ಅಧಿಕಾರಿ ನಾಗರಾಜರೊಂದಿಗೆ ಮಾತನಾಡಿ, ತಾಲೂಕಿನ ಎಲ್ಲಾ ರಸ್ತೆ ದುರಸ್ತಿ ಕುರಿತು ಸಮಗ್ರ ಮಾಹಿತಿ ಪಡೆದರು. ಸಿಂಧನೂರಿನಿಂದ ಬಪ್ಪೂರ, ಸಿಂಧನೂರು- ಅಲಬನೂರು, ವೆಂಕಟೇಶ್ವರ ಕ್ಯಾಂಪಿನಿಂದ ಅಂಬಾಮಠದವರೆಗೆ ರಸ್ತೆ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುತ್ತದೆ. ನಗರದಲ್ಲಿ ಡ್ರೈನೇಜ್ ಕಾಮಗಾರಿಯು ಒಂದು ತಿಂಗಳದ ಒಳಗಾಗಿ ಮುಗಿಸುತ್ತೇನೆಂದು ನಾಗರಾಜ ಭರವಸೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ, ಆಬಕಾರಿ ಇಲಾಖೆ, ನಗರ ಯೋಜನಾ ಪ್ರಾಧಿಕಾರ, ತಾಪಂ, ಆಹಾರ ಮತ್ತು ನಾಗರಿಕ ಸರಬರಾಜು, ಶಿಶು ಅಭಿವೃದ್ಧಿ ಯೋಜನೆ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ್ ವೆಂಕನಗೌಡ ಪಾಟೀಲ್, ನಗರಸಭೆ ಅಧ್ಯಕ್ಷ ಜಾಫರ್ ಅಲಿ ಜಾಗೀರದಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.