ಕಡಲೆಗೆ ಪ್ರೋತ್ಸಾಹ ಧನಕ್ಕೆ ರೈತ ಸಂಘ ಒತ್ತಾಯ
ಲಿಂಗಸ್ಗೂರು: ಕೇಂದ್ರ ಸರ್ಕಾರದ ಕಡಲೆಗೆ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡಿ ನೇರವಾಗಿ ಖರೀದಿಸಬೇಕೆಂದು ರಾಜ್ಯ ರೈತಸಂಘದ ನೇತೃತ್ವದಲ್ಲಿ ರೈತರು ಗುರುವಾರ ಉಪತಹಸೀಲ್ದಾರ್ ಖಾಜಾಹುಸೇನ್ರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ರೈತರು ಈ ವರ್ಷ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೆಳೆದಿದ್ದು, ಕಳೆದ ವರ್ಷ 4 ಸಾವಿರ ಮೇಲ್ಪಟ್ಟು ಮಾರಾಟವಾಗುತ್ತಿತ್ತು. ಆದರೆ ಈ ವರ್ಷ 2500 ರಿಂದ 2700 ವರೆಗೆ ಮಾರಾಟವಾಗುತ್ತಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಸಜ್ಜೆ, ಶೇಂಗಾ, ತೊಗರಿ, ಸೂರ್ಯಕಾಂತಿ ಸೇರಿದಂತೆ ಬೆಂಬಲ ಬೆಲೆಗಿಂತ ಕಡಿಮೆಯಿದೆ. ಕಡಲೆ ಉತ್ತರ ಕರ್ನಾಟಕದ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿದೆ.
ಕೃಷಿ ಉತ್ಪನ್ನ ಬೆಳೆಗಳಿಗೆ ಬೆಂಬಲ ಬೆಲೆ ಪ್ರೋತ್ಸಾಹ ಧನ ನೀಡಿ ಖರೀದಿ ಮಾಡಲು ಜ.27 ಹಾಗೂ 28ರಂದು ಅಮಣಾಂತ ಉಪವಾಸ ಸತ್ಯಾಗ್ರಹ ನಡೆಸಿದಾಗ ಸಹಾಯಕ ಆಯುಕ್ತರು ಎರಡು ದಿನ ಕಾಲಾವಕಾಶ ಪಡೆದ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೆ ಕಡಲೆ ಖರೀದಿ ಮಾಡುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಮಾಹಿತಿ ಬಂದಿರುವುದಿಲ್ಲ. ಜಿಲ್ಲೆಯ ಎಲ್ಲ ತಾಲೂಕುಗಳ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿ ಕಡಲೆ ಖರೀದಿ ಮಾಡಬೇಕು ಅಥವಾ ಮಾರುಕಟ್ಟೆಯಲ್ಲಿ ನೇರವಾಗಿ ಖರೀದಿ ಮಾಡುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಕಡಲೆ ಬೆಳೆದ ರೈತರ ಸ್ಥಿತಿ ಅಧೋಗತಿಗೆ ತೆರಳಿ ಒಕ್ಕಲುತನ ಬಿಡುವಂತ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕಾರಣ ಸೋಮವಾರ (ಫೆ.2) ದೊಳಗೆ ಖರೀದಿ ಕೇಂದ್ರ ಆರಂಭಿಸದಿದ್ದರೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ರೈತಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ತಾಲೂಕು ಅಧ್ಯಕ್ಷ ಸಿದ್ದೇಶ ಗೌಡೂರು, ಸಂ.ಕಾರ್ಯದರ್ಶಿ ಅಮರಯ್ಯಸ್ವಾಮಿ ಹುಲಿಗುಡ್ಡ, ಮುಖಂಡರಾದ ಶಿವಣ್ಣ ಭೂಪೂರ, ಚಂದಪ್ಪ, ಬಸನಗೌಡ, ಅಂಬಣ್ಣ, ಈರಣ್ಣ, ರಮೇಶ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

