ಸಿಂಧನೂರಿನಲ್ಲಿ ಸತ್ಯಾಗ್ರಹ
ಸಿಂಧನೂರು: ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂರಹಿತರಿಗೆ ಭೂಮಿಕೊಡಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ತಾಲೂಕ ಘಟಕದ ನೇತೃತ್ವದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಬಿಎಸ್ಪಿ ತಾಲೂಕಾಧ್ಯಕ್ಷ ಕೆ. ಹನುಮಂತಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂರಹಿತರಿಗೆ ಭೂಮಿಕೊಡಲು ಒತ್ತಾಯಿಸಿ ಕಳೆದ ವರ್ಷ ನ.28, 29, 30ರಂದು ಧರಣಿ ನಡೆಸಲಾಗಿತ್ತು. ಆದರೆ ಸರ್ಕಾರ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ತೋರಿಸದಿದ್ದರಿಂದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಇಂದು ಸಾಂಕೇತಿಕ ಧರಣಿ ಹಮ್ಮಿಕೊಂಡಿದೆ. ಪ್ರಮುಖವಾಗಿ ಸರ್ಕಾರ ವಿ. ಬಾಲಸುಬ್ರಣ್ಯನ್ ಸಮಿತಿ ವರದಿ ಒಪ್ಪಿಕೊಳ್ಳಬೇಕು. ಅದರನ್ವಯ ಅರ್ಜಿ ದಾರರಿಗೆ ಸಾಗುವಳಿ ಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಬಿಎಸ್ಪಿ ಸಂಯೋಜಕರಾದ ಕೆ. ಮರಿಯಪ್ಪ, ಎಂ.ಕೆ.ಜಗ್ಗೇಶ, ಕಾರ್ಯದರ್ಶಿ ಭೀಮಪ್ಪ ಕವಿತಾಳ ಮಾತನಾಡಿದರು. ಧರಣಿಯಲ್ಲಿ ಬಿಎಸ್ಪಿ ಮುಖಂಡರು, ಕಾರ್ಯಕರ್ಚರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

