ರಾಯಚೂರು

ಮುದಗಲ್ ಪಪಂ ಆಡಳಿತ ವಿಫಲ: ಆರೋಪ

Published On :

ಮುದಗಲ್: ಸ್ಥಳೀಯ ಪಟ್ಟಣ ಪಂಚಾಯ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿದ್ದು ಆಡಳಿತ ಮಂಡಳಿ ಸಂಪೂರ್ಣ ವಿಫಲವಾಗಿದೆ ಎಂದು ಪ.ಪಂ. ವಿರೋಧ ಪಕ್ಷದ ನಾಯಕ ಮಾಸೂಮ್ ಷರೀಫ್ ಆರೋಪಿಸಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರಕ್ಕೆ ಬಂದು ವರ್ಷ ಗತಿಸಿದರೂ ಪಟ್ಟಣದ ಅಭಿವೃದ್ಧಿ ಮಾತ್ರ ಶೂನ್ಯ. ಸರ್ಕಾರದ ವಿವಿಧ ಯೋಜನೆಗಳಲ್ಲಿ 4 ಕೋಟಿಗೂ ಅಧಿಕ ಅನುದಾನ ಇದ್ದು ಸಮರ್ಪಕವಾಗಿ ಕ್ರಿಯಾ ಯೋಜನೆ ಮಾಡುತ್ತಿಲ್ಲ. ಟೆಂಡರ್ ಕರೆದ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೆರಿದೆ, ಸ್ವಚ್ಛತೆಯಂತೂ ಮಾಡೋರಿಲ್ಲ. ಪಟ್ಟಣ ಪಂಚಾಯ್ತಿಗೆ ಹೋದರೆ ಕಚೇರಿ ಖಾಲಿ ಇರುತ್ತದೆ. ದೂರು ಕೇಳೋರಿಲ್ಲ, ಮುಖ್ಯಾಧಿಕಾರಿ, ಎಂಜಿನಿಯರ್, ನೈರ್ಮಲ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದುದರಿಂದ ಪಟ್ಟಣ ಪಂಚಾಯ್ತಿ ಇದ್ದು ಇಲ್ಲದಂತಾಗಿದೆ ಎಂದು ಟೀಕಿಸಿದರು.
ಅಧಿಕಾರಿಗಳಿಲ್ಲ ಎನ್ನುವ ನೆಪವೊಡ್ಡಿ ಅಧ್ಯಕ್ಷರು, ಉಪಾಧ್ಯಕ್ಷರು ಪಟ್ಟಣದ ಸಮಸ್ಯೆಗಳು ತಮಗೆ ಸಂಬಂಧ ಇಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಪಟ್ಟಣಕ್ಕೆ ನಾಲ್ಕು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಪಟ್ಟಣ ಪಂಚಾಯ್ತಿಯಲ್ಲಿ ಸಿಬ್ಬಂದಿ ಮೇಲೆ ಆಡಳಿತ ಮಂಡಳಿಯ ನಿಯಂತ್ರಣ ಇಲ್ಲದಾಗಿದೆ, ಬೇಕಾದಾಗ ಬರೋದು, ಬೇಡವಾದಾಗ ಬಿಡೋದಾಗಿದೆ, ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತಿವೆ. ಇದರಿಂದಾಗಿ ಆಡಳಿತ ಮಂಡಳಿ ಪಟ್ಟಣದ ಜನರಿಗೆ ಉತ್ತಮ ಸೇವೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ಪಟ್ಟಣ ಪಂಚಾಯ್ತಿಗೆ ಮುಖ್ಯಾಧಿಕಾರಿಗಳ, ಎಂಜಿನಿಯರ್‌ಗಳ, ನೈರ್ಮಲ್ಯಾಧಿಕಾರಿಗಳ ನೇಮಕ ಮಾಡಬೇಕು, ಪಟ್ಟಣದ ಜನರಿಗೆ ಸಮರ್ಪಕ ಕುಡಿಯುವ ನೀರು, ಸ್ವಚ್ಛತೆಗೆ ಆಡಳಿತ ಮಂಡಳಿ ಮುಂದಾಗಬೇಕು. ಇಲ್ಲದಿದ್ದರೆ ಪಟ್ಟಣ ಪಂಚಾಯ್ತಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.