ಆರ್ಟಿಐ, ಆರ್ಟಿಇ ಕಾರ್ಯಕರ್ತರ ವೇದಿಕೆ ಅಸ್ತಿತ್ವಕ್ಕೆ
ರಾಯಚೂರು: ಮಾಹಿತಿ ಹಕ್ಕು ಕಾಯಿದೆ ಹಾಗೂ ಕಡ್ಡಾಯ ಶಿಕ್ಷಣ ಕಾಯಿದೆ ಅಡಿ ಪ್ರಾಮಾಣಿಕವಾಗಿ ಹೋರಾಡುತ್ತಿರುವವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಹಾಗೂ ಕೆಲ ಸುಧಾರಣೆಗಳ ಉದ್ದೇಶದಿಂದ ರಾಜ್ಯದಲ್ಲಿ ಆರ್ಟಿಐ ಮತ್ತು ಆರ್ಟಿಇ ಕಾರ್ಯಕರ್ತರ ವೇದಿಕೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಕನ್ನಡ ಸಿರಿ ಆನಂದಕುಮಾರ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ವಿವಿಧ ಇಲಾಖೆಗಳಲ್ಲಿ ಮನೆ ಮಾಡಿದ ಭ್ರಷ್ಟಾಚಾರ ನಿರ್ಮೂಲನೆ ನಿಟ್ಟಿನಲ್ಲಿ ಹೋರಾಡುತ್ತಿರುವ ಆರ್ಟಿಐ, ಆರ್ಟಿಇ ಕಾರ್ಯಕರ್ತರು ಅನೇಕ ಸಂದರ್ಭದಲ್ಲಿ ಹಲ್ಲೆಗೊಳಗಾಗಿ, ಪ್ರಾಣಾಪಾಯಕ್ಕೆ ಸಿಲುಕಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವವೇ ಬುಡಮೇಲು: ಸಮರ್ಪಕ ಮಾಹಿತಿ ನೀಡದೇ ಹಲವು ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಿ ಇಲ್ಲವೇ ಆಮಿಷಕ್ಕೆ ಒಳಗಾಗುವಂತೆ ಹುನ್ನಾರ ನಡೆಸಿ ಬಗ್ಗು ಬಡಿಯುತ್ತಿರುವುದು ಪತ್ತೆಯಾಗಿದೆ. ಭ್ರಷ್ಟ ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕಾರ್ಯ ಮಾಡುತ್ತಿದ್ದು, ಅವ್ಯವಸ್ಥೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಾರ್ಯಕರ್ತರಿಗೆ ಬೆಂಬಲವಾಗಿ ವೇದಿಕೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಆಗ್ರಹ: ವೇದಿಕೆಯ ರಾಜ್ಯದಲ್ಲಿ ಮೊದಲ ಬಾರಿಗೆ ಅಸ್ತಿತ್ವಕ್ಕೆ ತರಲಾಗಿದ್ದು, ಆರ್ಟಿಐ ಮತ್ತು ಆರ್ಟಿಇ ಮಾಹಿತಿಗಳನ್ನು ಹೊರತೆಗೆದು ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕಾನೂನು ಸಮರ ಸಾರುವ ಕಾರ್ಯಕರ್ತರ ರಕ್ಷಣೆ ಹಾಗೂ ಅವರಿಗೆ ಸರ್ಕಾರದಿಂದ ಸವಲತ್ತು ದೊರಕಿಸಲು ವೇದಿಕೆ ನೆರವಾಗಲಿದೆ ಎಂದು ಹೇಳಿದರು. ವೇದಿಕೆಯ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಸಂಗಾಪುರ, ಲೋಕೇಶ್ ಹಳ್ಳಿಗೇರಿ, ವೈಜನಾಥ, ರಾಮಣ್ಣ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

