ಟಿಇಟಿ ಕೀ ಉತ್ತರ ಬಹುಪಾಲು ತಪ್ಪು: ಎಐಡಿಎಸ್ಒ
ರಾಯಚೂರು: ಟಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆ ಉತ್ತರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಬಿಡುಗಡೆಗೊಳಿಸಿದ್ದು ಅವುಗಳಲ್ಲಿ ಬಹುಪಾಲು ತಪ್ಪಿನಿಂದ ಕೂಡಿದೆ ಎಂದು ಎಐಡಿವೈಒ ಆರೋಪಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾಧ್ಯಕ್ಷ ಶರಣಪ್ಪ ಉದ್ಬಾಳ್ ಹಾಗೂ ಜಿಲ್ಲಾ ಕಾರ್ಯದರ್ಶಿ ಚನ್ನಬಸವ ಜಾನೇಕಲ್, ಜೂ.22ರಂದು ಪರೀಕ್ಷೆ ನಡೆಸಿದ್ದ ಇಲಾಖೆಯು ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸುವಲ್ಲಿ ವಿಫಲವಾಗಿದೆ. ಪ್ರಶ್ನೆಪತ್ರಿಕೆಗಳು ಬಯಲಾಗಿದ್ದರೂ ಇಲಾಖೆಗೆ ಅದರ ಬಗ್ಗೆ ನಿರ್ಲಕ್ಷ್ಯದ ಭಾವನೆ ಪ್ರದರ್ಶಿಸಿದ್ದು ಸದ್ಯ ತನ್ನ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ ಪರೀಕ್ಷೆಯ ಪ್ರಶ್ನೆಗಳ ಕೀ ಉತ್ತರಗಳಲ್ಲೂ ಲೋಪಗಳಿರುವುದು ಕಂಡುಬಂದಿದೆ ಎಂದು ದೂರಿದ್ದಾರೆ.
ಇಲಾಖೆಯು ತನ್ನ ವೆಬ್ಸೈಟ್ನಲ್ಲಿ ಬಿಡುಗಡೆಗೊಳಿಸಿರುವ ಉತ್ತರಗಳ ಪೈಕಿ ಬಹುಪಾಲು ತಪ್ಪಾಗಿದ್ದು ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಲ್ಲಿ ಗೊಂದಲಕ್ಕೆ ದಾರಿ ಮಾಡಿವೆ. ಅಭ್ಯರ್ಥಿಗಳ ಭವಿಷ್ಯಕ್ಕೆ ಮಾರಕವಾಗುವಂತಹ ಹಾಗೂ ಜವಾಬ್ದಾರಿ ಮರೆತು ಇಲಾಖೆ ಕಾರ್ಯನಿರ್ವಹಿಸಿರುವುದು ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ. ಕೀ ಉತ್ತರಗಳಲ್ಲಿನ ಲೋಪದ ಹಿನ್ನೆಲೆ ವಿರೋಧ ವ್ಯಕ್ತವಾಗಿದ್ದರಿಂದ ತರಾತುರಿಯಲ್ಲಿ ಮಾದರಿ ಉತ್ತರಗಳನ್ನು ವಾಪಸು ಪಡೆದಿದ್ದು, ಇನ್ನೆರಡು ದಿನಗಳಲ್ಲಿ ಸರಿಯಾದ ಉತ್ತರಗಳನ್ನು ಪ್ರಕಟಿಸುವುದಾಗಿ ಹೇಳಿಕೊಂಡಿದೆ. ಇದು ಇಲಾಖೆಯ ಕಾರ್ಯವೈಖರಿ ಸ್ಪಷ್ಟಗೊಳಿಸಿದೆ ಎಂದು ಆರೋಪಿಸಿದ್ದಾರೆ.
ಟಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಬಯಲಾಗಿದ್ದರಿಂದ ಕೂಡಲೇ ಪರೀಕ್ಷೆ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷೆ ನಡೆಸುವಾಗ ಹಾಗೂ ಉತ್ತರಗಳನ್ನು ಪ್ರಕಟಿಸುವಾಗ ನಡೆದಿರುವ ತಪ್ಪಿಗೆ ಹೊಣೆಯಾದವರನ್ನು ಉಗ್ರವಾಗಿ ಶಿಕ್ಷಿಸಿ, ಪರೀಕ್ಷಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

