ರಾಯಚೂರು

ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನ ಸಭೆ ಅಗತ್ಯ

Published On :

ದೇವದುರ್ಗ: ಗ್ರಾಮೀಣ ಭಾಗದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನ ಸಭೆ ಸಹಕಾರಿಯಾಗಿದ್ದು, ತಾಲೂಕು ಆಡಳಿತದ ಎಲ್ಲ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದಾರೆಂದು ಶಾಸಕ ವೆಂಕಟೇಶ ನಾಯಕ ಹೇಳಿದರು.
ತಾಲೂಕಿನ ಮುಂಡರಗಿಯಲ್ಲಿ ತಾಲೂಕು ಆಡಳಿತದಿಂದ ಇತ್ತೀಚೆಗೆ ಆಯೋಜಿಸಿದ್ದ ಜನ ಸ್ಪಂದನ ಸಭೆ ಉದ್ಘಾಟಿಸಿ ಮಾತನಾಡಿ, ಸಭೆ ಆಯೋಜನೆಯಿಂದ ಗ್ರಾಮೀಣ ಭಾಗದ ಜನತೆ ತಮ್ಮ ಕೆಲಸ ಕಾರ್ಯಗಳಿಗೆ ಪಟ್ಟಣಕ್ಕೆ ಆಗಮಿಸುವ ಅನಿವಾರ್ಯತೆ ತಪ್ಪಿದೆ. ಈಗಾಗಲೇ ಜಾಲಹಳ್ಳಿ ಹೋಬಳಿ ಮಟ್ಟದಲ್ಲಿ ಮದುವೆ ಆಗದೆ ಇರುವ ಮಹಿಳೆಯರಿಗೆ ಮನಸ್ವಿನಿ ಯೋಜನೆ ಅಡಿ 7 ಜನರಿಗೆ ಮಾಸಾಶನ ಹಾಗೂ ಐವರು ವಿಕಲಚೇತನರಿಗೆ ಸೇರಿ ಒಟ್ಟು 423 ಜನರಿಗೆ ವಿವಿಧ ಮಾಸಾಶನ ನೀಡಲಾಗಿದೆ ಎಂದರು.
ಸಭೆಯಲ್ಲಿ ಸಂಸದ ಬಿ.ವಿ. ನಾಯಕ ಮಾತನಾಡಿದರು. ಜಿಪಂ ಸದಸ್ಯ ಶಿವಣ್ಣ ತಾತಾ ಮುಂಡರಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮನಗೌಡ ನಾಗಡದಿನ್ನಿ, ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ, ಗ್ರಾಪಂ ಸದಸ್ಯ ಗ್ವಾಲಪ್ಪ, ಪ್ರಭಾರಿ ತಹಸೀಲ್ದಾರ್ ಹುಸೇನಪ್ಪ, ತಾಪಂ ಇಒ ಬಿ.ಬಿ. ಕುಲಕರ್ಣಿ,  ಜಿಪಂ ಎಇಇ ವೆಂಕಟೇಶ ಗಲಗ, ಪ್ರಭಾರಿ ಸಿಡಿಪಿಒ ಯಮನಪ್ಪ ವಾಲ್ಮೀಕಿ, ಜಿಲ್ಲಾ ಗ್ರಂಥಾಲಯ ಅಧಿಕಾರಿ ರೇಬಿನಾಳ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.