ರಾಜ್ಯ ಸರ್ಕಾರಿ ನೌಕರರ ಸಂಘ ಸಮ್ಮೇಳನ ಆ.22ಕ್ಕೆ: ಪಾಷಾ ಮೂಲಿಮನಿ
ರಾಯಚೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಸಮ್ಮೇಳನವನ್ನು ಆ.22ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಂಘದ ಅಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಹೇಳಿದರು. ನಗರದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2008ರಲ್ಲಿ ಶಿವಮೊಗ್ಗದಲ್ಲಿ ಸಮ್ಮೇಳನ ನಡೆದಿತ್ತು. ಆರು ವರ್ಷಗಳ ನಂತರ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಮೈಸೂರಿನಲ್ಲಿ ಆ.22ರಂದು ಆಯೋಜಿಸಲಾಗಿದೆ. ಲಕ್ಷಕ್ಕೂ ಅಧಿಕ ಸಂಖ್ಯೆಯ ಸರ್ಕಾರಿ ನೌಕರರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಪ್ರತ್ಯೇಕ ವ್ಯವಸ್ಥೆಗೆ ಆಗ್ರಹ: ಹೈ-ಕ ಭಾಗಕ್ಕೆ 371ನೇ ಕಲಂ ಅಡಿ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಅದರ ನಿಗದಿ ಮತ್ತು ದೊರಕಿಸುವಲ್ಲಿ ಅನ್ಯಾಯ ಮಾಡಲಾಗುತ್ತಿದ್ದು, ಅದನ್ನು ತಡೆಯಲು ಹೈ-ಕ ಭಾಗಕ್ಕೆ ಪ್ರತ್ಯೇಕ ಆಡಳಿತ ನ್ಯಾಯ ಮಂಡಳಿ ಶೀಘ್ರ ಸ್ಥಾಪಿಸುವಂತೆ ಸಮ್ಮೇಳನದಲ್ಲಿ ಆಗ್ರಹಿಸಲಾಗುತ್ತದೆ ಎಂದು ಹೇಳಿದರು. ಸಮ್ಮೇಳನದ ಸ್ಮರಣ ಸಂಚಿಕೆ ಹೊರತರಲಾಗುತ್ತಿದ್ದು, ಪ್ರತಿಭಾನ್ವಿತ ಸರ್ಕಾರಿ ನೌಕರರು ಕಥೆ, ಕವನ, ಲೇಖನಗಳನ್ನು ಕಳಿಸ ಬಹುದಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗುತ್ತಿದ್ದು, ಪ್ರತಿನಿಧಿ ಶುಲ್ಕವಾಗಿ 300 ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರು ಸಮ್ಮೇಳನ ಉದ್ಘಾಟಿಸಲಿದ್ದು, ಅವರ ಸಂಪುಟದ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

