ಉತ್ತಮ ಸೇವೆಯಿಂದ ವ್ಯಕ್ತಿತ್ವ ವೃದ್ಧಿ: ಡಿಡಿಪಿಐ
ದೇವದುರ್ಗ: ಉತ್ತಮ ಸೇವೆಯ ನಡುವೆ ಸ್ನೇಹ, ಸಹಕಾರ, ಪ್ರೀತಿ, ವಿಶ್ವಾಸಗಳು ನಮ್ಮನ್ನು ಮೇಲ್ಮಟ್ಟಕ್ಕೇರಿಸುತ್ತವೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೇಯ ತಿಳಿಸಿದರು.
ಅವರು ಇತ್ತೀಚೆಗೆ ತಾಲೂಕು ದೈಹಿಕ ಶಿಕ್ಷಕರ ಸಂಘದಿಂದ ಏರ್ಪಡಿಸಿದ್ದ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಣಾಧಿಕಾರಿ ಸಿ.ಎಸ್. ಶಿಂಧೆ, ಶಿಕ್ಷಣ ಸಂಯೋಜಕ ಮಲ್ಲಪ್ಪ, ಶಿಕ್ಷಕ ಗುರುಲಿಂಗಯ್ಯ ಕೋಡಿಮಠ ಅವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಡಿ. ಹುನಗುಂದ ವಹಿಸಿದ್ದರು. ಸಹಾಯಕ ಯೋಜನಾಧಿಕಾರಿ ಜೀವನಸಾಬ್, ಲಿಂಗಸ್ಗೂರು ದೈಹಿಕ ಶಿಕ್ಷಣಾಧಿಕಾರಿ ಶಿವಪುತ್ರಪ್ಪ ಭೂತಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹನುಮಂತ್ರಾಯ ಶಾಖೆ, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಪ್ಪ ಅಕ್ಕರಕಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶಿವಪುತ್ರಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಮಲ್ಲಯ್ಯ, ಬಾಲಪ್ಪ ಭಾವಿಮನಿ, ರಂಗನಾಥ, ದಾವಲಸಾಬ್ ಬಂಡಿ, ಸೋನುಬಾಯಿ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

