ರಾಯಚೂರು

ಪಟ್ಟಣ ಸಮಸ್ಯೆ ಪರಿಹಾರಕ್ಕೆ ಯತ್ನ

Published On :

ಮಸ್ಕಿ: ಮಸ್ಕಿ ಪಟ್ಟಣ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಮಸ್ಕಿ ಗ್ರಾಪಂ ಅಧ್ಯಕ್ಷ ವೀರೇಶ ಹೂವಿನಬಾವಿ ಹೇಳಿದರು.
ಸ್ಥಳೀಯ ಗ್ರಾಪಂ ನಲ್ಲಿ ಶುಕ್ರವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣಕ್ಕೆ ಕುಡಿಯುವ ನೀರೊದಗಿಸುವ ಕೆರೆಯಲ್ಲಿ ಸದ್ಯ ಒಂದು ವಾರಕ್ಕೆ ಸಾಕಾಗುವಷ್ಟು ನೀರಿನ ಸಂಗ್ರಹವಿದೆ. ನಂತರ ಸಮಸ್ಯೆ ಉಲ್ಬಣವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೋರವೆಲ್‌ಗಳ ಪುನಶ್ಚೇತನಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.
ಶಾಸಕರ ಹಾಗೂ ಗ್ರಾಪಂನ ಎಲ್ಲ ಸದಸ್ಯರ ಸಲಹೆ ಸಹಕಾರಗಳೊಂದಿಗೆ ಸಮಸ್ಯೆಗಳನ್ನು ಪರಿಹರಿಸುವುದೇ ತಮ್ಮ ಗುರಿಯಾಗಿದೆ ಎಂದು ಹೇಳಿದರು.
ಆಯ್ಕೆ: ಇದಕ್ಕೂ ಮೊದಲು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 51 ಸದಸ್ಯ ಬಲದ ಗ್ರಾಪಂ.ನಲ್ಲಿ ಕಾಂಗ್ರೆಸ್ ಬೆಂಬಲಿತ ವೀರೇಶ ಹೂವಿನಭಾವಿ ಅವರಿಗೆ 36 ಮತಗಳು ಬಂದು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಅವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಮರಳದ 15 ಮತ ಗಳಿಸಿ ಪರಾಭವಗೊಂಡರು.
51 ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು 41 ಜನರಿದ್ದು, ಬಿಜೆಪಿ ಬೆಂಬಲಿತ 10 ಜನ ಸದಸ್ಯರಿದ್ದರೂ ಇನ್ನೂ 5 ಹೆಚ್ಚುವರಿ ಮತಗಳನ್ನು ಪಡೆದಿದು ಚರ್ಚೆಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.