ಯುವಜನ ಜಾಗೃತ ಆಗದಿದ್ರೆ ಅಪಾಯ
ಸಿಂಧನೂರು: ದೇಶದ ಜನಸಂಖ್ಯೆ ಪ್ರತಿ ವರ್ಷ 1.80 ಕೋಟಿ ಹೆಚ್ಚುತ್ತಿದ್ದು, ಯುವಜನತೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ತಂದುಕೊಂಡಂತೆ ಎಂದು ತಾಪಂ ಇಒ ಜೆ.ಬಿ. ಹೂಗಾರ ಹೇಳಿದರು.
ಸ್ಥಳೀಯ ತಾಪಂ, ತಾಲೂಕಾಡಳಿತ, ತಾಲೂಕು ಆರೋಗ್ಯಾಧಿಕಾರಿ ಕಾರ್ಯಾಲಯ, ನಗರಸಭೆ, ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಂಖ್ಯೆ ಹೆಚ್ಚಳದಿಂದಾಗಿ ಗ್ರಾಮಗಳ ಕೃಷಿ ಭೂಮಿಯು ನಿವೇಶನಗಳಾಗಿ ಮಾರ್ಪಾಡಾಗುತ್ತಿವೆ. ಜನರಿಗೆ ಮೂಲ ಸೌಕರ್ಯಗಳು ಅಲಭ್ಯವಾಗುತ್ತಿವೆ ಎಂದರು.
ವೈದ್ಯಾಧಿಕಾರಿ ಡಾ. ಕರವೀರಪ್ರಭು ಕ್ಯಾಲಕೊಂಡ ಮಾತನಾಡಿ, ದೇಶದ ಜನಸಂಖ್ಯೆ ಮುಂದಿನ 40 ವರ್ಷಗಳಲ್ಲಿ 240 ಕೋಟಿಗೆ ಏರುವ ಸಾಧ್ಯತೆ ಇದೆ. ಅದಕ್ಕಾಗಿ 'ಹೆಣ್ಣಾಗಲಿ, ಗಂಡಾಗಲಿ ಒಂದೇ ಮಗು ಇರಲಿ' ಎಂಬ ತತ್ವಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ ಮಾತನಾಡಿ, ಆರೋಗ್ಯ ಕ್ಷೇತ್ರದ ಪ್ರಗತಿಯಿಂದಾಗಿ ಶಿಶು, ತಾಯಿ ಮರಣ ಪ್ರಮಾಣ ತಗ್ಗಿದೆ. ಹೆಣ್ಣು ಮಕ್ಕಳಿಗೆ ಉನ್ನತ ವ್ಯಾಸಂಗದವರೆಗೆ ಶಿಕ್ಷಣ ನೀಡುವುದು. ಮದುವೆ ನಂತರ ಕನಿಷ್ಟ 3 ವರ್ಷ ಮೊದಲ ಮಗುವಿಗೆ ಅಂತರ ಕಾಯ್ದುಕೊಳ್ಳುವುದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ ಎಂದರು.
ನಗರಸಭಾಧ್ಯಕ್ಷ ಜಾಫರ ಕಾರ್ಯಕ್ರಮ ಉದ್ಘಾಟಿಸಿದರು. ಶರಣೇಗೌಡ, ಪ್ರಹ್ಲಾದ್, ಶ್ರೀದೇವಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

