ರಾಯಚೂರು

ಕುಡಿವ ನೀರು, ಸ್ವಚ್ಛತೆ, ಅಭಿವೃದ್ಧಿಗೆ ಆದ್ಯತೆ

Published On :

ರಾಯಚೂರು: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲಾಗುವುದು ಎಂದು ನಗರಸಭೆಯ ಹಂಗಾಮಿ ಅಧ್ಯಕ್ಷೆ ಪದ್ಮಾವತಿ ಹೇಳಿದರು.
ನಗರದಲ್ಲಿ ಸೋಮವಾರ ನಡೆದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡ ನಂತರ ಅಧ್ಯಕ್ಷರ ಕಾರ್ಯಭಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಪದಚ್ಯುತ ಅಧ್ಯಕ್ಷೆ ಮಹಾದೇವಿ ನಾಯಕ ಅವರ ಅವಧಿಯಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಅಂಥ ಎಲ್ಲ ಕಾರ್ಯಗಳನ್ನು ಈಗ ಚುರುಕುಗೊಳಿಸಲಾಗುತ್ತದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಚರಂಡಿ ಸ್ವಚ್ಛತೆ ಸೇರಿದಂತೆ ಜನತೆಯ ಬೇಡಿಕೆಯಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಮೊದಲಿನ ಅಧ್ಯಕ್ಷರು ವಿಫಲ: ನಗರಸಭೆ ಸದಸ್ಯರು ನೀಡುತ್ತಿದ್ದ ಸಲಹೆ ಸೂಚನೆಗಳಿಗೆ ಈ ಮೊದಲಿನ ಅಧ್ಯಕ್ಷೆ ಮಹಾದೇವಿ ನಾಯಕ ಅವರು ಗಮನಹರಿಸಲಿಲ್ಲ. ಅದರಿಂದಾಗಿ ಅವರು ಆಡಳಿತ ನಿರ್ವಹಣೆಯಲ್ಲಿ ವಿಫಲರಾಗಿದ್ದರು. ಅಂತೆಯೇ ಅವರ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಲಾಯಿತೇ ವಿನಾ ಅವರು ಮಹಿಳೆ ಎಂಬ ಕಾರಣಕ್ಕೆ ಅವಿಶ್ವಾಸಕ್ಕೆ ಮುಂದಾಗಿಲ್ಲ ಎಂದ ಅವರು, ಏಕಪಕ್ಷೀಯವಾಗಿ ಕೈಗೊಳ್ಳುತ್ತಿದ್ದ ನಿರ್ಧಾರಗಳಿಂದಾಗಿಯೇ ಅವರು ಸ್ಥಾನ ಕಳೆದುಕೊಂಡರು ಎಂದು ದೂರಿದರು.
ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಮಾರೆಪ್ಪ, ನರಸಪ್ಪ ಯಕ್ಲಾಸಪುರ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.